ಸರ್ ಗಂಗಾರಾಮ್ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್: ಜೂನ್ 23ಕ್ಕೆ ಇಡಿ ವಿಚಾರಣೆ ಎದುರಿಸುವ ಸಾಧ್ಯತೆ !

Prasthutha|

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಕೋವಿಡ್ 19 ಸೋಂಕಿನ ಹಿನ್ನೆಲೆಯಲ್ಲಿ ಸರ್ ಗಂಗಾರಾಮ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಸೋಮವಾರ ಡಿಸ್ಚಾರ್ಜ್ ಆಗಿದ್ದು, ಜೂನ್ 23 ರಂದು ಅವರನ್ನು ಇಡಿ ಸಂಸ್ಥೆ ವಿಚಾರಣೆಗೊಳಪಡಿಸುವ ಸಾಧ್ಯತೆಯಿದೆ ಎಂದು ಕಾಂಗ್ರೆಸ್ ಸಂಸದ ಜೈರಾಮ್ ರಮೇಶ್ ತಿಳಿಸಿದ್ದಾರೆ.

- Advertisement -

ನ್ಯಾಷನಲ್ ಹೆರಾಲ್ಡ್ ಪ್ರಕರಣದ ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಜೂನ್ 23 ರಂದು ಸೋನಿಯಾ ಗಾಂಧಿ ಅವರನ್ನು ವಿಚಾರಣೆಗೊಳಪಡಿಸಲಿದೆ.

ಕೋವಿಡ್ ಸೋಂಕಿನ ಹಿನ್ನೆಲೆಯಲ್ಲಿ ಸೋನಿಯಾ ಗಾಂಧಿ ಅವರನ್ನು ಜೂನ್ 12 ರಂದು ತುರ್ತು ವಿಭಾಗಕ್ಕೆ ಕರೆದೊಯ್ಯಲಾಗಿದ್ದು, ತೀವ್ರ ನಿಗಾ ಘಟಕದಲ್ಲಿರಿಸಲಾಗಿತ್ತು.



Join Whatsapp