ಐದು ರಾಜ್ಯದ ಕಾಂಗ್ರೆಸ್ ಅಧ್ಯಕ್ಷರನ್ನು ವಜಾಗೊಳಿಸಿದ ಸೋನಿಯಾ ಗಾಂಧಿ!

Prasthutha|

ನವದೆಹಲಿ: ಪಂಚ ರಾಜ್ಯಗಳ ಸೋಲಿನ ಬಳಿಕ ಇದೀಗ ಕಾಂಗ್ರೆಸ್‍ನಲ್ಲಿ ಬದಲಾವಣೆ ಪರ್ವ ಶುರುವಾಗಿದೆ. ಪಂಜಾಬ್ ಕಾಂಗ್ರೆಸ್‍ನ ಅಧ್ಯಕ್ಷರಾದ ನವಜೋತ್ ಸಿಂಗ್ ಸಿಧು ಮತ್ತು ಇತರ ನಾಲ್ಕು ರಾಜ್ಯಗಳ ಕಾಂಗ್ರೆಸ್ ಅಧ್ಯಕ್ಷರನ್ನು ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ವಜಾಗೊಳಿಸಿದ್ದಾರೆ.

- Advertisement -

ಈ ಬಗ್ಗೆ ಟ್ವಿಟ್ಟರ್‌ನಲ್ಲಿ ಟ್ವೀಟ್ ಮಾಡಿರುವ ಪಕ್ಷದ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲಾ, ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಸೇರಿದಂತೆ ಮಣಿಪುರ, ಗೋವಾ, ಉತ್ತರಾಖಂಡ ಹಾಗೂ ಉತ್ತರ ಪ್ರದೇಶದ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡುವಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ತಿಳಿಸಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.

ಪಂಚ ರಾಜ್ಯಗಳ ಚುನಾವಣೆ ಸೋಲಿನ ಬಳಿಕ ಕಾಂಗ್ರೆಸ್ ಕಾರ್ಯಕಾರಿಣಿ ಸಭೆಯಲ್ಲಿ ಸೋನಿಯಾ ಗಾಂಧಿ ಹಾಗೂ ಗಾಂಧಿ ಪರಿವಾರದಿಂದಲೇ ಕಾಂಗ್ರೆಸ್ ಮುನ್ನಡೆಸುವುದು ಸೂಕ್ತ ಎಂಬ ಅಭಿಪ್ರಾಯ ವ್ಯಕ್ತವಾಗಿತ್ತು. ಇದೀಗ ಐದು ರಾಜ್ಯಗಳ ಕಾಂಗ್ರೆಸ್ ಅಧ್ಯಕ್ಷರನ್ನು ಚುನಾವಣಾ ಸೋಲಿಗೆ ಹೊಣೆಯಾಗಿಸಿ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಲು ಸೋನಿಯಾ ಗಾಂಧಿ ನಿರ್ಧರಿಸಿದ್ದಾರೆ.

Join Whatsapp