ನವದೆಹಲಿ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ರಾಜಸ್ಥಾನದಿಂದ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಸೋನಿಯಾ ಗಾಂಧಿ ಅವರೊಂದಿಗೆ ಬಿಜೆಪಿ ನಾಯಕರಾದ ಚುನ್ನಿಲಾಲ್ ಗರಾಸಿಯಾ ಮತ್ತು ಮದನ್ ರಾಥೋಡ್ ಕೂಡ ಮೇಲ್ಮನೆಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ವಿಧಾನಸಭೆ ಕಾರ್ಯದರ್ಶಿ ಮಹಾವೀರ್ ಪ್ರಸಾದ್ ಶರ್ಮಾ ತಿಳಿಸಿದ್ದಾರೆ.
ನಾಮಪತ್ರ ಹಿಂಪಡೆಯಲು ಮಂಗಳವಾರ ಕೊನೆಯ ದಿನವಾಗಿತ್ತು. ಕಣದಲ್ಲಿ ಬೇರೆ ಯಾರೂ ಸ್ಪರ್ಧಿಗಳು ಇಲ್ಲದ ಕಾರಣ, ಮೂವರು ನಾಯಕರು ಅವಿರೋಧವಾಗಿ ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ.