ಹೊಸದಿಲ್ಲಿ: ಕೋವಿಡ್ ಸೋಂಕಿಗೆ ತುತ್ತಾಗಿದ್ದ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಭಾನುವಾರ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಸೋನಿಯಾ ಗಾಂಧಿ ಅವರನ್ನು ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಈ ಕುರಿತು ಮಾಹಿತಿ ನೀಡಿರುವ ಕಾಂಗ್ರೆಸ್ ವಕ್ತಾರ ರಂದೀಪ್ ಸುರ್ಜೇವಾಲಾ ಅವರು, ಸೋನಿಯಾ ಗಾಂಧಿ ಅವರು ಕೋವಿಡ್ ಸಂಬಂಧಿ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಆದರೆ ಭಯ ಪಡುವ ಅಗತ್ಯವಿಲ್ಲ.. ಅವರ ಆರೋಗ್ಯ ಸ್ಥಿರವಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಅವರನ್ನು ಆಸ್ಪತ್ರೆಯಲ್ಲಿ ವೀಕ್ಷಣೆಯಲ್ಲಿಡಲಾಗಿದೆ ಎಂದು ಹೇಳಿದರು.