ಕಾಂಗ್ರೆಸ್ ನಲ್ಲಿ ಭಿನ್ನಮತ ಸ್ಫೋಟ: ಗುಲಾಂ ನಬಿ ಆಝಾದ್ – ಸೋನಿಯಾ ಗಾಂಧಿ ಭೇಟಿ ಸಾಧ್ಯತೆ ?

Prasthutha|

ನವದೆಹಲಿ: ಪಂಚರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್ ಅನುಭವಿಸಿದ ಹೀನಾಯ ಸೋಲಿನ ಹಿನ್ನೆಲೆಯಲ್ಲಿ ಪಕ್ಷದಲ್ಲಿ ತಲೆದೋರಿರುವ ಭಿನ್ನಮತವನ್ನು ಶಮನಗೊಳಿಸುವ ನಿಟ್ಟಿನಲ್ಲಿ ಸೋನಿಯಾ ಗಾಂಧಿ ಅವರು ಹಿರಿಯ ಮುಖಂಡ ಗುಲಾಂ ನಬಿ ಆಝಾದ್ ಅವರನ್ನು ಭೇಟಿಯಾಗುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

- Advertisement -

ಪಕ್ಷದ ಹಿರಿಯ ಮುಖಂಡರಾದ ಗುಲಾಂ ನಬಿ ಆಝಾದ್ ನೇತೃತ್ವದ ಕಾಂಗ್ರೆಸ್ ನ ಜಿ – 23 ಭಿನ್ನಮತೀಯರ ಗುಂಪೊಂದು ಪಕ್ಷದ ಮುಂದಿನ ಮಾರ್ಗವನ್ನು ಚರ್ಚಿಸಲು ಭೇಟಿಯಾದ ಒಂದು ದಿನದ ಬಳಿಕ ಉಭಯ ನಾಯಕರು ಭೇಟಿಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.

ಕಾಂಗ್ರೆಸ್ ಸತತ ಸೋಲಿನ ನಡುವೆಯೂ ಗಾಂಧಿ ಕುಟುಂಬವು ನಾಯಕತ್ವದಲ್ಲಿ ಮುಂದುವರಿಸಬೇಕೆಂದು ಪಕ್ಷದ ಕಾರ್ಯಕಾರಿಣಿ ಸಮಿತಿಯ ಸಭೆಯಲ್ಲಿ ನಿರ್ಣಯವಾದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿರುವ ಕೆಲವು ಮುಖಂಡರು ಪ್ರತ್ಯೇಕ ಸಭೆಯಲ್ಲಿ ನಡೆಸುತ್ತಿದ್ದಾರೆ ಎಂಬ ಮಾಹಿತಿಯ ಹಿನ್ನೆಲೆಯಲ್ಲಿ ಉಭಯ ನಾಯಕರ ಈ ಭೇಟಿ ಸಾಕಷ್ಟು ಮಹತ್ವ ಪಡೆದಿದೆ ಎಂದು ಹೇಳಲಾಗಿದೆ.

- Advertisement -

ಇತ್ತೀಚೆಗೆ ನಡೆದ CWC ಸಭೆಯಲ್ಲಿ ಸೋನಿಯಾ ಗಾಂಧಿ ಅವರು ತನ್ನ ಮಕ್ಕಳಾದ ರಾಹುಲ್ ಮತ್ತು ಪ್ರಿಯಾಂಕಾ ಗಾಂಧಿ ಅವರೊಂದಿಗೆ ಪಕ್ಷದ ಎಲ್ಲಾ ಹುದ್ದೆಗಳನ್ನು ತೊರೆಯುವ ಪ್ರಸ್ತಾಪವನ್ನು ಸರ್ವಾನುಮತದಿಂದ ತಿರಸ್ಕರಿಸಿತ್ತು.

Join Whatsapp
Exit mobile version