Home ಟಾಪ್ ಸುದ್ದಿಗಳು ಯೆಚೂರಿ, ಪವಾರ್ ಸೇರಿದಂತೆ ಪ್ರತಿಪಕ್ಷ ನಾಯಕರ ಸಭೆ ಕರೆದ ಕಾಂಗ್ರೆಸ್

ಯೆಚೂರಿ, ಪವಾರ್ ಸೇರಿದಂತೆ ಪ್ರತಿಪಕ್ಷ ನಾಯಕರ ಸಭೆ ಕರೆದ ಕಾಂಗ್ರೆಸ್

ಮಮತಾ ಬ್ಯಾನರ್ಜಿಯನ್ನು ಬೆಚ್ಚಿಬೀಳಿಸಿದ ಸೋನಿಯಾ ಗಾಂಧಿಯ ಅನಿರೀಕ್ಷಿತ ನಡೆ!

ಹೊಸದಿಲ್ಲಿ: ತೃಣಮೂಲ ಕಾಂಗ್ರೆಸ್ ನಾಯಕಿ ಮಮತಾ ಬ್ಯಾನರ್ಜಿ ಅವರನ್ನು ಕರೆಯದೆ ಕಾಂಗ್ರೆಸ್ ವಿರೋಧ ಪಕ್ಷಗಳ ಸಭೆ ಕರೆದಿದೆ.
ಸೋನಿಯಾ ಗಾಂಧಿಯ ಈ ಅನಿರೀಕ್ಷಿತ ನಡೆಯು ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸುತ್ತಾ ವಿಪಕ್ಷಗಳ ಒಗ್ಗಟ್ಟಿಗಾಗಿ ಶ್ರಮಿಸುತ್ತಿದ್ದ ಮಮತಾ ಬ್ಯಾನರ್ಜಿಯನ್ನು ಬೆಚ್ಚಿ ಬೀಳಿಸಿದೆ.

ರಾಜ್ಯಸಭೆಯಿಂದ 12 ಸಂಸದರನ್ನು ಅಮಾನತುಗೊಳಿಸಿದ ಹಿನ್ನೆಲೆಯಲ್ಲಿ ಮುಂದಿನ ಕ್ರಮವನ್ನು ನಿರ್ಧರಿಸಲು ಈ ಸಭೆ ಕರೆಯಲಾಗಿದೆ ಎಂದು ಹೇಳಲಾಗಿದೆ.

ಸೋನಿಯಾ ಗಾಂಧಿ ನಿವಾಸದಲ್ಲಿ ನಡೆದ ಸಭೆಗೆ ಮಮತಾ ಬ್ಯಾನರ್ಜಿ ಗೈರಾಗಿರುವುದು ಗಮನಾರ್ಹವಾಗಿತ್ತು. ಎನ್‌ಸಿಪಿ, ಡಿಎಂಕೆ, ಶಿವಸೇನೆ ಮತ್ತು ಸಿಪಿಐ(ಎಂ) ಸೇರಿದಂತೆ ನಾಯಕರನ್ನು ಸಭೆಗೆ ಕರೆಯಲಾಗಿತ್ತು.
ಶರದ್ ಪವಾರ್, ಸಂಜಯ್ ರಾವತ್, ಟಿಆರ್ ಬಾಲು, ಸೀತಾರಾಂ ಯೆಚೂರಿ ಮತ್ತು ಫಾರೂಕ್ ಅಬ್ದುಲ್ಲಾ ಸೇರಿದಂತೆ ನಾಯಕರು ಸಭೆಯಲ್ಲಿ ಭಾಗವಹಿಸಿದ್ದರು. ರಾಹುಲ್ ಗಾಂಧಿ, ಕೆ.ಸಿ. ವೇಣುಗೋಪಾಲ್, ಮಲ್ಲಿಕಾರ್ಜುನ ಖರ್ಗೆ ಕೂಡ ಸಭೆಯಲ್ಲಿ ಉಪಸ್ಥಿತರಿದ್ದರು.

ಗೋವಾ ವಿಧಾನಸಭಾ ಚುನಾವಣಾ ಪ್ರಚಾರ ಸಭೆಯಲ್ಲಿ ಮಮತಾ ಬ್ಯಾನರ್ಜಿ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದರು.

Join Whatsapp
Exit mobile version