ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿಯಿಂದ ಸೋನಿಯಾಗಾಂಧಿ ಅವರನ್ನು ವಿಚಾರಣೆಗೊಳಪಡಿಸಿದ್ದನ್ನು ವಿರೋಧಿಸಿ ಯೂತ್ ಕಾಂಗ್ರೆಸ್ ಕಾರ್ಯಕರ್ತರು ಬೆಂಗಳೂರಿನಲ್ಲಿ ಕಾರಿಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದ್ದಾರೆ.
ಇದಕ್ಕೆ ಸಂಬಂಧಿಸಿದ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಯೂತ್ ಕಾಂಗ್ರೆಸ್ ಕಾರ್ಯಕರ್ತರು ಇಡಿ ವಿರುದ್ಧ ಘೋಷಣೆ ಕೂಗುವುದರೊಂದಿಗೆ ಕಾರಿಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.