ರಾಯ್ಬರೇಲಿ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಯವರು ತಮ್ಮ ಸಂಸದರ ನಿಧಿಯಲ್ಲಿ ಶೇ 70ಕ್ಕಿಂತಲೂ ಅಧಿಕ ಪ್ರಮಾಣವನ್ನು ಅಲ್ಪಸಂಖ್ಯಾತರಿಗೆ ವ್ಯಯಿಸಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಆರೊಪ ಮಾಡಿದ್ದಾರೆ.
ರಾಯ್ ಬರೇಲಿಯಲ್ಲಿ ಚುನಾವಣಾ ರ್ಯಾಲಿ ಉದ್ದೇಶಿಸಿ ಮಾತನಾಡಿದ ಅವರು, ಗಾಂಧಿ ಕುಟುಂಬವು ಸುಳ್ಳು ಹೇಳುವುದರಲ್ಲಿ ನಿಪುಣರು.ಸೋನಿಯಾ ಗಾಂಧಿಯವರು ತಮ್ಮ ಸಂಸದರ ನಿಧಿಯಲ್ಲಿ ಶೇ 70ಕ್ಕಿಂತಲೂ ಅಧಿಕ ಪ್ರಮಾಣವನ್ನು ಅಲ್ಪಸಂಖ್ಯಾತರಿಗೆ ವ್ಯಯಿಸಿದ್ದಾರೆ. ಈ ಕ್ಷೇತ್ರದಿಂದ ನೆಹರು ಕುಟುಂಬಕ್ಕೆ ಹಲವು ವರ್ಷಗಳಿಂದ ಅವಕಾಶ ನೀಡಿದ್ದೀರಿ. ಆದರೆ ಯಾವುದೇ ಅಭಿವೃದ್ಧಿ ಕಾರ್ಯ ಆಗಿಲ್ಲ. ಕಾಂಗ್ರೆಸ್ಗೆ ಅಭಿವೃದ್ಧಿ ಕಾರ್ಯಗಳ ಬಗ್ಗೆ ನಂಬಿಕೆ ಇಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
ಬಿಜೆಪಿ ಅಭ್ಯರ್ಥಿ ದಿನೇಶ್ ಪ್ರತಾಪ್ ಸಿಂಗ್ ಅವರಿಗೆ ಮತ ಹಾಕುವಂತೆ ಮನವಿ ಮಾಡಿದ ಅವರು, ರಾಯ್ ಬರೇಲಿಯನ್ನು ಮೋದಿ ಅವರ ಅಭಿವೃದ್ಧಿ ಪಯಣದಲ್ಲಿ ಸೇರಿಸುತ್ತೇವೆ ಎಂದು ಭರವಸೆ ನೀಡಿದರು.
ರಾಯ್ಬರೇಲಿ ಲೋಕಸಭೆ ಚುನಾವಣೆಯ ಐದನೇ ಹಂತದಲ್ಲಿ ಅಂದರೆ, ಮೇ 20 ರಂದು ಮತದಾನ ನಡೆಯಲಿದೆ.