ರಾಜಸ್ಥಾನದಿಂದ ರಾಜ್ಯಸಭೆಗೆ ಸೋನಿಯಾ ಗಾಂಧಿ: ನಾಳೆ ರಾಹುಲ್ ಜೊತೆ ನಾಮಪತ್ರ ಸಲ್ಲಿಕೆ

Prasthutha|

ನವದೆಹಲಿ: ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಮೊದಲ ಬಾರಿಗೆ ರಾಜ್ಯಸಭಾ ಸದಸ್ಯರಾಗಲಿದ್ದು, ರಾಜಸ್ಥಾನದಿಂದ ರಾಜ್ಯಸಭೆಗೆ ಹೋಗಲಿದ್ದಾರೆ‌ ಎಂದು ವರದಿಯಾಗಿದೆ. ನಾಳೆ (ಫೆಬ್ರವರಿ 14)ರಂದು ನಾಮಪತ್ರ ಸಲ್ಲಿಸಲಿದ್ದಾರೆ. ಈ ಸಮಯದಲ್ಲಿ ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಇರಲಿದ್ದಾರೆ ಎಂದು ವರದಿಯಾಗಿದೆ.

- Advertisement -

ದೇಶದ 15 ರಾಜ್ಯಗಳ 54 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಇದಕ್ಕಾಗಿ ಜನವರಿ 29 ರಂದು ಘೋಷಣೆ ಮಾಡಲಾಯಿತು. ಈ 56 ಸ್ಥಾನಗಳಿಗೆ ಫೆಬ್ರವರಿ 27 ರಂದು ಚುನಾವಣೆ ನಡೆಯಲಿದೆ. ಈ ಪೈಕಿ ರಾಜಸ್ಥಾನದ ಮೂರು ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ರಾಜ್ಯಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಯೂ ಆರಂಭವಾಗಿದೆ.



Join Whatsapp