ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ರನ್ನು ಪಕ್ಷಕ್ಕೆ ಆಹ್ವಾನಿಸಿದ ಸೋನಿಯಾ ಗಾಂಧಿ

Prasthutha|

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಅವರನ್ನು ಪಕ್ಷಕ್ಕೆ ಸೇರಿಕೊಳ್ಳುವಂತೆ ಕರೆಮಾಡಿ ಆಹ್ವಾನಿಸಿದ್ದಾರೆ.

ಇದೇ ವೇಳೆ ಕಿಶೋರ್ ಅವರೊಂದಿಗೆ ಸೋನಿಯಾ ಗಾಂಧಿಯವರು ಪ್ರಸಕ್ತ ರಾಜಕೀಯ ವಿದ್ಯಮಾನಗಳ ಕುರಿತು ಸಮಾಲೋಚನೆ ನಡೆಸಿದ್ದಾರೆಂದು ಮೂಲಗಳು ತಿಳಿಸಿವೆ. ಇತ್ತೀಚೆಗೆ ಬಂಗಾಳದಲ್ಲಿ ನಡೆದ ಚುನಾವಣೆಯಲ್ಲಿ ಕಿಶೋರ್ ಅವರು ಟಿ.ಎಂ.ಸಿ ಯೊಂದಿಗೆ ಕೆಲಸ ಮಾಡಿದ್ದಾರೆ ಮತ್ತು ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಭರ್ಜರಿ ಗೆಲುವಿನ ಹಿಂದಿನ ರುವಾರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು.

- Advertisement -

ಚುನಾವಣಾ ವಿಷಯಕ್ಕೆ ಸಂಬಂಧಿಸಿದಂತೆ ಕಿಶೋರ್ ಅವರಿಗೆ ಪೂರ್ಣ ಪ್ರಮಾಣದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾರೆ ಮತ್ತು ಚುನಾವಣೆಯನ್ನು ಗೆಲ್ಲುವ ಸಲುವಾಗಿ ಸ್ವತಂತ್ರ ನಿರ್ಧಾರಕ್ಕೆ ಅವಕಾಶ ನೀಡಲಾಗಿತ್ತು. ಎರಡು ಸಾರ್ವತ್ರಿಕ ಚುನಾವಣೆಯಲ್ಲಿ ಸೋಲು ಅನುಭವಿಸಿದ ನಂತರ ಕಾಂಗ್ರೆಸ್ ಉತ್ತಮ ಸಲಹೆಗಾರರನ್ನು ಹುಡುಕುತ್ತಿದೆ. ಅನುಭವಿ ನಾಯಕ ಅಹ್ಮದ್ ಪಟೇಲ್ ಅವರ ನಿಧನದೊಂದಿಗೆ ಕಾಂಗ್ರೆಸ್ ಈಗಾಗಲೇ ಒಬ್ಬ ತಂತ್ರಜ್ಞನನ್ನು ಕಳೆದುಕೊಂಡಿದೆ.

ಮುಂದಿನ ವರ್ಷ ನಡೆಯಲಿರುವ ಯುಪಿ ಸೇರಿದಂತೆ ಹಲವು ರಾಜ್ಯಗಳ ವಿಧಾನಸಭಾ ಚುನಾವಣೆಗೂ ಮುನ್ನ ಪಕ್ಷವನ್ನು ಮರು ಸಂಘಟಿಸ ಬೇಕಾಗಿದೆ. ಈ ಕುರಿತು ಚರ್ಚಿಸಲು ಹಲವು ಬಾರಿ ಕಾಂಗ್ರೆಸ್ ನಾಯಕ ಮತ್ತು ಮಾಜಿ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಅವರು ಕಿಶೋರ್ ಅವರನ್ನು ಭೇಟಿ ನಡೆಸಿದ್ದರೆಂದು ಹೇಳಲಾಗುತ್ತಿದೆ.

ಈ ಹಿಂದೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಮತ್ತು ಹಂಗಾಮಿ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿ ಪಕ್ಷದ ಬೆಳವಣಿಗೆಯನ್ನು ಮಾಡುವ ನಿಟ್ಟಿನಲ್ಲಿ ಯೋಜನೆಯ ಬಗ್ಗೆ ಚರ್ಚೆ ನಡೆಸಿದ್ದರು.

ಕಿಶೋರ್ ಅವರು ಶೀಘ್ರದಲ್ಲೇ ಸಕ್ರಿಯ ರಾಜಕೀಯಕ್ಕೆ ಧುಮುಕುವ ಸಾಧ್ಯತೆಯ ಹಿನ್ನೆಲೆಯಲ್ಲಿ ಸೋನಿಯಾ ಅವರು ಕಿಶೋರ್ ಅವರನ್ನು ಕಾಂಗ್ರೆಸ್ ಸೇರುವಂತೆ ಆಹ್ವಾನಿಸಿದ್ದಾರೆ ಎಂದು ಮೂಲಗಳು ಹೇಳುತ್ತಿವೆ.

- Advertisement -