ಬಿಜೆಪಿ ವಿರುದ್ಧ ಒಗ್ಗಟ್ಟಿನಿಂದ ಹೋರಾಡಬೇಕು: ಇಂಡಿಯಾಗೆ ಸೋನಿಯಾ ಕರೆ

Prasthutha|

- Advertisement -

ಮುಂಬೈ: ವಿರೋಧ ಪಕ್ಷಗಳ ಮೈತ್ರಿ ಕೂಟ ಇಂಡಿಯಾ ಬಿಜೆಪಿ ವಿರುದ್ಧ ಒಗ್ಗಟ್ಟಾಗಿ ಹೋರಾಡಬೇಕಿದೆ ಎಂದು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಕರೆ ನೀಡಿದ್ದಾರೆ.

ಶನಿವಾರ ಮುಂಬೈನಲ್ಲಿ ಐಎನ್‌ ಡಿಐಎ (ಇಂಡಿಯಾ) ಒಕ್ಕೂಟದ ಉನ್ನತಮಟ್ಟದ ಸಭೆ ನಡೆಯಿತು. ಸಭೆಯ ಬಳಿಕ ಮಾತನಾಡಿದ ಅವರು, ಬಿಜೆಪಿ ವಿರುದ್ಧ ಒಗ್ಗಟ್ಟಾಗಿ ಹೋರಾಡುವಂತೆ ಕರೆ ನೀಡಿದ್ದಾರೆ.