ರಾಮ ಮಂದಿರ ಉದ್ಘಾಟನೆ| ಸೋನಿಯಾ, ಖರ್ಗೆ ಕಾರ್ಯಕ್ರಮಕ್ಕೆ ಹಾಜರಾಗುವ ಬಗ್ಗೆ ಸೂಕ್ತ ಸಮಯದಲ್ಲಿ ನಿರ್ಧಾರ: ಜೈರಾಮ್ ರಮೇಶ್

Prasthutha|

ನವದೆಹಲಿ: ಅಯೋಧ್ಯೆಯಲ್ಲಿ 2024ರ ಜ.22ರಂದು ನಡೆಯಲಿರುವ ರಾಮಮಂದಿರ ಉದ್ಘಾಟನಾ ಸಮಾರಂಭಕ್ಕೆ ಬರುವಂತೆ ಐಎಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಸೋನಿಯಾ ಗಾಂಧಿ ಅವರಿಗೆ ಶ್ರೀರಾಮ ಜನ್ಮಭೂಮಿ ಟ್ರಸ್ಟ್ ಆಹ್ವಾನ ನೀಡಲಾಗಿದ್ದು, ಕಾರ್ಯಕ್ರಮಕ್ಕೆ ಹಾಜರಾಗುವ ಬಗ್ಗೆ ಸೂಕ್ತ ಸಮಯದಲ್ಲಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ.

- Advertisement -

ಈ ಕುರಿತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಮಾತನಾಡಿ, ‘ನಮ್ಮ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಅವರು ರಾಮಮಂದಿರ ಉದ್ಘಾಟನಾ ಸಮಾರಂಭದ ಆಹ್ವಾನವನ್ನು ಸ್ವೀಕರಿಸಿದ್ದಾರೆ. ಕಾರ್ಯಕ್ರಮದಲ್ಲಿ ಭಾಗವಹಿಸುವ ಕುರಿತು ಸೂಕ್ತ ಸಮಯದಲ್ಲಿ ನಿರ್ಧಾರ ತೆಗೆದುಕೊಳ್ಳುತ್ತಾರೆ’ ಎಂದು ಹೇಳಿದ್ದಾರೆ.

Join Whatsapp