Home Uncategorized ಮತ್ತೆ ಇಡಿ ಮುಂದೆ ಹಾಜರಾಗಲಿರುವ ಸೋನಿಯಾ; ಸಂಸತ್, ಪಕ್ಷದ ಕಚೇರಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ

ಮತ್ತೆ ಇಡಿ ಮುಂದೆ ಹಾಜರಾಗಲಿರುವ ಸೋನಿಯಾ; ಸಂಸತ್, ಪಕ್ಷದ ಕಚೇರಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ

ನವದೆಹಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡನೇ ಸುತ್ತಿನ ವಿಚಾರಣೆಗಾಗಿ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಮಂಗಳವಾರ ಜಾರಿ ನಿರ್ದೇಶನಾಲಯದ (ಇ.ಡಿ) ಮುಂದೆ ಹಾಜರಾಗುವ ಸಾಧ್ಯತೆಯಿದೆ.

ಜುಲೈ 26ರಂದು ನ್ಯಾಷನಲ್ ಹೆರಾಲ್ಡ್ ಪ್ರಕರಣದ ವಿಚಾರಣೆಗೆ ಹಾಜರಾಗುವಂತೆ ಇ.ಡಿ ಕಾಂಗ್ರೆಸ್ ಅಧ್ಯಕ್ಷರಿಗೆ ಜುಲೈ 22 ರಂದು ಹೊಸ ಸಮನ್ಸ್ ನೀಡಿತ್ತು.

ನ್ಯಾಷನಲ್ ಹೆರಾಲ್ಡ್ ಮನಿ ಲಾಂಡರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋನಿಯಾ ಗಾಂಧಿ ಮತ್ತೆ ಜಾರಿ ನಿರ್ದೇಶನಾಲಯದ (ಇ.ಡಿ) ಮುಂದೆ ಹಾಜರಾಗುವ ನಿರೀಕ್ಷೆಯಿರುವುದರಿಂದ ಕಾಂಗ್ರೆಸ್ ಮಂಗಳವಾರ ನವದೆಹಲಿಯ ತನ್ನ ಕೇಂದ್ರ ಕಚೇರಿ ಮತ್ತು ಸಂಸತ್ ಆವರಣದಲ್ಲಿ “ಸತ್ಯಾಗ್ರಹ” ನಡೆಸಲು ಯೋಜಿಸಿದೆ.

ಪಕ್ಷವು ಈ ಹಿಂದೆ ರಾಜ್ಘಾಟ್ ಲ್ಲಿ ಪ್ರತಿಭಟಿಸಲು ಯೋಜಿಸಿತ್ತು ಆದರೆ ಅಧಿಕಾರಿಗಳು ಅನುಮತಿ ನಿರಾಕರಿಸಿದರು. ಅಲ್ಲದೆ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಕೇಂದ್ರ ಕಚೇರಿಯ ಹೊರಗೆ ಭಾರಿ ಭದ್ರತೆಯನ್ನು ನಿಯೋಜಿಸಲಾಗಿದೆ.

ಇಡಿ ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಇಂದು ದೇಶಾದ್ಯಂತ ಪ್ರತಿಭಟನೆ ನಡೆಸಲು ತೀರ್ಮಾನಿಸಿದೆ.

Join Whatsapp
Exit mobile version