ಅಕ್ರಮವಾಗಿ ಹೆಣ್ಣು ಮಗು ದತ್ತು ಪಡೆದ ಆರೋಪ: ಸೋನು ಗೌಡ ಫಸ್ಟ್​ ರಿಯಾಕ್ಷನ್​

Prasthutha|

- Advertisement -

ಬೆಂಗಳೂರು: ಮಾಜಿ ಬಿಗ್​ ಬಾಸ್​ ಸ್ಪರ್ಧಿ ಸೋನು ಶ್ರೀನಿವಾಸ್​ ಗೌಡ ಕಾನೂನುಬಾಹಿರವಾಗಿ ಹೆಣ್ಣು ಮಗುವನ್ನು ದತ್ತು ಪಡೆದ ಆರೋಪದಲ್ಲಿ ಬಂಧನಕ್ಕೆ ಒಳಗಾಗಿದ್ದಾರೆ.
ಅವರನ್ನು ನಾಲ್ಕು ದಿನಗಳ ಕಾಲ ಪೊಲೀಸ್​ ಕಸ್ಟಡಿಗೆ ಒಪ್ಪಿಸಲಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೇ ಮೊದಲ ಬಾರಿಗೆ ಸೋನು ಗೌಡ ಅವರು ಪ್ರತಿಕ್ರಿಯೆ ನೀಡಿದ್ದಾರೆ.

- Advertisement -

ಪೊಲೀಸ್​ ವಾಹನದಲ್ಲಿ ತೆರಳುವುದಕ್ಕೂ ಮುನ್ನ ಮಾಧ್ಯಮಗಳ ಎದುರು ಸೋನು ಶ್ರೀನಿವಾಸ್​ ಗೌಡ ಹೇಳಿಕೆ ನೀಡಿದ್ದಾರೆ. ‘ಕಾನೂನು ಪ್ರಕಾರ ತನಿಖೆ ನಡೆಯುತ್ತಿದೆ. ಏನೂ ತೊಂದರೆ ಇಲ್ಲ. ಒಂದು ಹುಡುಗಿಯನ್ನು ರಕ್ಷಣೆ ಮಾಡೋಕೆ ಅಂತ ನಾನು ಕರೆದುಕೊಂಡ ಬಂದಿದ್ದು. ಅವಳು ಈಗಲೂ ಆರಾಮಾಗಿ, ಸುರಕ್ಷಿತವಾಗಿ ಇದ್ದಾಳೆ’ ಎಂದು ಸೋನು ಗೌಡ ಹೇಳಿದ್ದಾರೆ.



Join Whatsapp