Home ಟಾಪ್ ಸುದ್ದಿಗಳು ಅಕ್ರಮವಾಗಿ ಹೆಣ್ಣು ಮಗು ದತ್ತು ಪಡೆದ ಆರೋಪ: ಸೋನು ಗೌಡ ಫಸ್ಟ್​ ರಿಯಾಕ್ಷನ್​

ಅಕ್ರಮವಾಗಿ ಹೆಣ್ಣು ಮಗು ದತ್ತು ಪಡೆದ ಆರೋಪ: ಸೋನು ಗೌಡ ಫಸ್ಟ್​ ರಿಯಾಕ್ಷನ್​

ಬೆಂಗಳೂರು: ಮಾಜಿ ಬಿಗ್​ ಬಾಸ್​ ಸ್ಪರ್ಧಿ ಸೋನು ಶ್ರೀನಿವಾಸ್​ ಗೌಡ ಕಾನೂನುಬಾಹಿರವಾಗಿ ಹೆಣ್ಣು ಮಗುವನ್ನು ದತ್ತು ಪಡೆದ ಆರೋಪದಲ್ಲಿ ಬಂಧನಕ್ಕೆ ಒಳಗಾಗಿದ್ದಾರೆ.
ಅವರನ್ನು ನಾಲ್ಕು ದಿನಗಳ ಕಾಲ ಪೊಲೀಸ್​ ಕಸ್ಟಡಿಗೆ ಒಪ್ಪಿಸಲಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೇ ಮೊದಲ ಬಾರಿಗೆ ಸೋನು ಗೌಡ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಪೊಲೀಸ್​ ವಾಹನದಲ್ಲಿ ತೆರಳುವುದಕ್ಕೂ ಮುನ್ನ ಮಾಧ್ಯಮಗಳ ಎದುರು ಸೋನು ಶ್ರೀನಿವಾಸ್​ ಗೌಡ ಹೇಳಿಕೆ ನೀಡಿದ್ದಾರೆ. ‘ಕಾನೂನು ಪ್ರಕಾರ ತನಿಖೆ ನಡೆಯುತ್ತಿದೆ. ಏನೂ ತೊಂದರೆ ಇಲ್ಲ. ಒಂದು ಹುಡುಗಿಯನ್ನು ರಕ್ಷಣೆ ಮಾಡೋಕೆ ಅಂತ ನಾನು ಕರೆದುಕೊಂಡ ಬಂದಿದ್ದು. ಅವಳು ಈಗಲೂ ಆರಾಮಾಗಿ, ಸುರಕ್ಷಿತವಾಗಿ ಇದ್ದಾಳೆ’ ಎಂದು ಸೋನು ಗೌಡ ಹೇಳಿದ್ದಾರೆ.

Join Whatsapp
Exit mobile version