ಹಿಂದಿಯನ್ನು ನಾವು ರಾಷ್ಟ್ರ ಭಾಷೆ ಎಂದು ಪರಿಗಣಿಸಲು ಆಗುವುದಿಲ್ಲ: ಅಜಯ್ ಗೆ ಸೋನು ಸೂದ್ ತಿರುಗೇಟು

Prasthutha|

ಮುಂಬೈ: ಹಿಂದಿಯನ್ನು ನಾವು ರಾಷ್ಟ್ರ ಭಾಷೆ ಎಂದು ಪರಿಗಣಿಸಲು ಆಗುವುದಿಲ್ಲ. ದೇಶಕ್ಕೆ ಇರುವುದೊಂದೇ ಭಾಷೆ, ಅದು ಮನರಂಜನೆ ಎಂದು ‘ಹಿಂದಿ ರಾಷ್ಟ್ರೀಯ ಭಾಷೆ’ ಎಂಬ ವಿವಾದಕ್ಕೆ ಸಂಬಂಧಿಸಿ ಬಾಲಿವುಡ್ ನಟ ಸೋನು ಸೂದ್ ಅವರು ಸಹ ನಟ ಅಜಯ್‌ ದೇವ ಗನ್‌ ತಿರುಗೇಟು ನೀಡಿದ್ದಾರೆ.

- Advertisement -


‘ಹಿಂದಿಯನ್ನು ನಾವು ರಾಷ್ಟ್ರ ಭಾಷೆ ಎಂದು ಪರಿಗಣಿಸಲು ಆಗುವುದಿಲ್ಲ. ದೇಶಕ್ಕೆ ಇರುವುದೊಂದೇ ಭಾಷೆ, ಅದು ಮನರಂಜನೆ. ನೀವು ಯಾವ ಚಿತ್ರರಂಗಕ್ಕೆ ಸೇರಿದವರು ಎಂಬುದು ಮುಖ್ಯವಲ್ಲ. ಪ್ರೇಕ್ಷಕರನ್ನು ರಂಜಿಸಿದರೆ ಅವರು ನಿಮ್ಮನ್ನು ಇಷ್ಟಪಡುತ್ತಾರೆ. ಅಷ್ಟೇ ಅಲ್ಲ ಜನ ನಿಮ್ಮನ್ನು ಪ್ರೀತಿಸಲು ಶುರು ಮಾಡುತ್ತಾರೆ’. ಚಿತ್ರ ನಿರ್ಮಾಪಕರು ಮತ್ತು ನಟರು ಜನರ ಸಂವೇದನೆಯನ್ನು ಹೇಗೆ ಗೌರವಿಸಬೇಕು ಎಂಬುದನ್ನು ಅರಿತುಕೊಳ್ಳಬೇಕು ಎಂದು ಸೂದ್ ತಿಳಿಸಿದ್ದಾರೆ.

Join Whatsapp