ಬಿಜೆಪಿ ಶಾಸಕ ಕುಮಾರ ಬಂಗಾರಪ್ಪ ವಿರುದ್ಧ ಬೈಕ್ ರ್‍ಯಾಲಿ ನಡೆಸಿದ ಸ್ವಪಕ್ಷದ ಮುಖಂಡರು!

Prasthutha|

ಸೊರಬ: ಬಿಜೆಪಿಯಲ್ಲಿ ಮೂಲ ಮತ್ತು ವಲಸಿಗರ ನಡುವೆ ಭಿನ್ನಮತ ಸ್ಫೋಟಗೊಂಡಿದ್ದು, ಸೊರಬ ಕ್ಷೇತ್ರದ ಶಾಸಕ ಕುಮಾರ ಬಂಗಾರಪ್ಪ ವಿರುದ್ಧ ಅಸಮಾಧಾನ ಭುಗಿಲೆದ್ದಿದೆ.
ಕುಮಾರ್ ಬಂಗಾರಪ್ಪ ವಿರುದ್ಧ ಸೊರಬ ತಾಲೂಕಿನ ಮೂಲ ಬಿಜೆಪಿ ಹಾಗೂ ಆರ್​ಎಸ್​ಎಸ್ ಮುಖಂಡರು ಸೇರಿಕೊಂಡು ‘ನಮೋ ಸೊರಬ ವೇದಿಕೆ’ ಕೂಡ ಸ್ಥಾಪನೆ ಮಾಡಿದ್ದಾರೆ.

ಇಂದು(ಮಾರ್ಚ್ 26) ಬೃಹತ್​ ಬೈಕ್ ರ್‍ಯಾಲಿ ಮಾಡಿದ ನಮೋ ವೇದಿಕೆಯ ಸಾವಿರಾರು ಕಾರ್ಯಕರ್ತರು ಯಾವುದೇ ಕಾರಣಕ್ಕೂ ಈ ಬಾರಿ ಕುಮಾರ್ ಬಂಗಾರಪ್ಪಗೆ ಬಿಜೆಪಿ ಟಿಕೆಟ್ ನೀಡದಂತೆ ಆಗ್ರಹಿಸಿದ್ದಾರೆ.

- Advertisement -

ಈ ವೇಳೆ ಬಿಜೆಪಿ ಹಿರಿಯ ಮುಖಂಡ ಪದ್ಮನಾಭ ಭಟ್ ಹಾಗೂ ಸೊರಬ ನಮೋ ವೇದಿಕೆಯ ಪಾಣಿ ರಾಜಪ್ಪ ಅವರು ಕುಮಾರ್ ಬಂಗಾರಪ್ಪ ವಿರುದ್ಧ ಬಹಿರಂಗ ಅಸಮಾಧಾನ ಹೊರಹಾಕಿದರು.

- Advertisement -