Home ಟಾಪ್ ಸುದ್ದಿಗಳು ಜಾರ್ಖಂಡ್ ಮುಖ್ಯಮಂತ್ರಿಯಾಗಿ ಸೊರೇನ್ ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ

ಜಾರ್ಖಂಡ್ ಮುಖ್ಯಮಂತ್ರಿಯಾಗಿ ಸೊರೇನ್ ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ

ರಾಂಚಿ: ಇಂದು ಸಂಜೆ 5 ಗಂಟೆಗೆ ಜಾರ್ಖಂಡ್ ಮುಖ್ಯಮಂತ್ರಿಯಾಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಸುದ್ದಿಸಂಸ್ಥೆ ಎಎನ್ಐ ವರದಿ ಮಾಡಿದೆ.

ಮುಖ್ಯಮಂತ್ರಿ ಸ್ಥಾನಕ್ಕೆ ಚಾಂಪೈ ಸೊರೇನ್ ಬುಧವಾರ ರಾಜೀನಾಮೆ ಸಲ್ಲಿಸಿದ ಬೆನ್ನಲ್ಲೇ ರಾಜ್ಯದಲ್ಲಿ ಸರ್ಕಾರ ರಚಿಸುವಂತೆ ರಾಜ್ಯಪಾಲ ಸಿ.ಪಿ.ರಾಧಾಕೃಷ್ಣನ್ ಅವರು ಹೇಮಂತ್ ಸೊರೇನ್ ಅವರಿಗೆ ಆಹ್ವಾನ ನೀಡಿದ್ದರು ಎಂದು ಪಕ್ಷದ ನಾಯಕರೊಬ್ಬರು ತಿಳಿಸಿದ್ದಾರೆ.


ಈ ಮೊದಲು ಜುಲೈ 7ಕ್ಕೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ವರದಿಯಾಗಿತ್ತು.


ಮಿತ್ರಪಕ್ಷಗಳ ಶಾಸಕರ ನಡುವೆ ಭಿನ್ನಾಭಿಪ್ರಾಯ ಬಂದಿದ್ದರಿಂದ ಹೇಮಂತ್ ಸೊರೇನ್ ಅವರೇ ರಾಜ್ಯದ ಮುಖ್ಯಮಂತ್ರಿ ಆಗಬೇಕು ಎಂಬ ಒತ್ತಾಯಗಳು ಕೇಳಿ ಬಂದಿದ್ದವು. ಇದರಿಂದ ಚಾಂಪೈ ಸೊರೇನ್ ಬುಧವಾರ ಸಂಜೆ ರಾಜೀನಾಮೆ ಸಲ್ಲಿಸಿದ್ದರು.

Join Whatsapp
Exit mobile version