thನವದೆಹಲಿ: ಸೌದಿ ಅರೇಬಿಯಾದ ದೊರೆ ಮುಹಮ್ಮದ್ ಬಿನ್ ಸಲ್ಮಾನ್ ನವೆಂಬರ್ 14ರಂದು ಭಾರತಕ್ಕೆ ಭೇಟಿ ನೀಡಲಿದ್ದಾರೆ ಎಂದು ಖಾತ್ರಿಯಾಗಿದೆ.
ಪ್ರಧಾನಿ ಮೋದಿಯ ಆಹ್ವಾನದಂತೆ, ನವೆಂಬರ್ ತಿಂಗಳ ಮಧ್ಯದಲ್ಲಿ ಇಂಡೋನೇಷ್ಯಾದಲ್ಲಿ ನಡೆಯಲಿರುವ ಜಿ-20 ಶೃಂಗಸಭೆಗೆ ತೆರಳಲು ಮುಹಮ್ಮದ್ ಬಿನ್ ಸಲ್ಮಾನ್ ಭಾರತದಲ್ಲಿ ಒಂದು ದಿನ ತಂಗಲಿದ್ದಾರೆ. ನವೆಂಬರ್ 14ರಂದು ಭಾರತಕ್ಕೆ ಬಂದು ಸಂಜೆ ಇಂಡೋನೇಷ್ಯಾಕ್ಕೆ ತೆರಳಲಿದ್ದಾರೆ ಎಂದು ಬಲ್ಲ ಮೂಲಗಳು ತಿಳಿಸಿವೆ.
ವಿದೇಶಾಂಗ ಸಚಿವ ಎಸ್ ಜೈಶಂಕರ್ ಮೂಲಕ ಸೆಪ್ಟೆಂಬರ್ ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು, ಸೌದಿ ದೊರೆ ಮುಹಮ್ಮದ್ ಬಿನ್ ಸಲ್ಮಾನ್ ಅವರನ್ನು ಭಾರತವನ್ನು ಭೇಟಿ ನೀಡುವಂತೆ ಆಹ್ವಾನಿಸಿದ್ದರು ಎಂದು ಬಲ್ಲ ಮೂಲಗಳು ತಿಳಿಸಿವೆ.
ಆಹ್ವಾನವನ್ನು ಸ್ವೀಕರಿಸಿದ ಬಿನ್ ಸಲ್ಮಾನ್ ಅವರು ನವೆಂಬರ್ 14 ರಂದು ಭಾರತಕ್ಕೆ ಭೇಟಿ ನೀಡಲಿದ್ದಾರೆ ಎನ್ನಲಾಗಿದೆ.