ಸೌದಿ ಅರೇಬಿಯಾ: ಶಾಲಾ ಬಸ್ ಪಲ್ಟಿಯಾಗಿ ವಿದ್ಯಾರ್ಥಿನಿ ಮೃತ್ಯು; 24 ಮಂದಿಗೆ ಗಾಯ

Prasthutha|

ರಿಯಾದ್: ಸೌದಿ ಅರೇಬಿಯಾದ ಅಲ್ ಖಾಸಿಮ್‌ನಲ್ಲಿ ಶಾಲಾ ಬಸ್ ಪಲ್ಟಿಯಾದ ಪರಿಣಾಮ ವಿದ್ಯಾರ್ಥಿನಿಯೊಬ್ಬರು ಸಾವನ್ನಪ್ಪಿದ್ದು, 24 ಮಂದಿ ಗಾಯಗೊಂಡಿದ್ದಾರೆ.

ಅಲ್ ಖಾಸಿಮ್ ವಿಶ್ವವಿದ್ಯಾಲಯಕ್ಕೆ ಸೇರಿದ ಬಸ್ ಕಾರೊಂದಕ್ಕೆ ಡಿಕ್ಕಿಯಾಗಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.

- Advertisement -

ಎಲ್ಲಾ ಗಾಯಾಳುಗಳನ್ನು ತಕ್ಷಣ ಹತ್ತಿರದ ಆಸ್ಪತ್ರೆಗಳಿಗೆ ದಾಖಲಿಸಲಾಯಿತು. ಇವರಲ್ಲಿ ಇಬ್ಬರನ್ನು ಹೊರತುಪಡಿಸಿ ಉಳಿದವರೆಲ್ಲರೂ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ವಿಶ್ವವಿದ್ಯಾಲಯದ ಅಧಿಕಾರಿಗಳು ತಿಳಿಸಿದ್ದಾರೆ.

ಸ್ಥಳೀಯ ನಿವಾಸಿಗಳು ರಕ್ಷಣಾ ಕಾರ್ಯದಲ್ಲಿ ತೊಡಗಿರುವುದು

ಬುರೈದಾ ನಗರದ ನೋರ್ತ್ ರಿಂಗ್ ರೋಡ್ ಬಳಿಯ ಕಿಂಗ್ ಅಬ್ದುಲ್ ಅಜೀಜ್ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ. ಮಾಹಿತಿ ಲಭಿಸಿದ ತಕ್ಷಣ 12 ಆಂಬ್ಯುಲೆನ್ಸ್‌ಗಳನ್ನು ಒಳಗೊಂಡ ತಂಡವನ್ನು ಸ್ಥಳಕ್ಕೆ ಕಳುಹಿಸಲಾಗಿದೆ ಎಂದು ಖಾಸಿಮ್ ಪ್ರದೇಶದ ರೆಡ್ ಕ್ರೆಸೆಂಟ್ ಅಥೋರಿಟಿ ಬ್ರಾಂಚ್ ಕಮಾಂಡ್ ಮತ್ತು ಕಂಟ್ರೋಲ್ ವಿಭಾಗ ತಿಳಿಸಿದೆ.

- Advertisement -