ಸೌಜನ್ಯಾ ಪ್ರಕರಣ ಮರು ತನಿಖೆ: ಸಿದ್ದರಾಮಯ್ಯ ಹೇಳಿದ್ದೇನು?

Prasthutha|

ಮಂಗಳೂರು: ಧರ್ಮಸ್ಥಳದ ಸೌಜನ್ಯಾ ಪ್ರಕರಣ ಸಿಬಿಐ ತನಿಖೆ ನಡೆಸಿದೆ. ನ್ಯಾಯಾಲಯದ ತೀರ್ಪಿನ ವಿರುದ್ಧವಾಗಿ ಮೇಲ್ಮನವಿ ಸಲ್ಲಿಸುವಂತೆ ಕುಟುಂಬದವರು ಒತ್ತಾಯಿಸಿದ್ದಾರೆ. ತೀರ್ಪನ್ನು ಓದಿಲ್ಲ. ಓದಿ ನಂತರ ಈ ಬಗ್ಗೆ ಪರಿಶೀಲಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

- Advertisement -


ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉಂಟಾಗಿರುವ ಮಳೆ ಹಾನಿ ಪರಿಶೀಲನೆಗಾಗಿ ಇಲ್ಲಿಗೆ ಆಗಮಿಸಿರುವ ಮುಖ್ಯಮಂತ್ರಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿದರು.


ಕರಾವಳಿಯಲ್ಲಿ ಮತೀಯ ಗೂಂಡಾಗಿರಿ ಪ್ರಕರಣಗಳು ಹೆಚ್ಚುತ್ತಿರುವ ಕುರಿತು ಪ್ರತಿಕ್ರಿಯಿಸಿದ ಅವರು, ‘ಯಾರೇ ಕಾನೂನು ಕೈಗೆತ್ತಿಕೊಂಡರೂ ತಪ್ಪು. ಕಾನೂನು ಕೈಗೆತ್ತಿಕೊಳ್ಳುವುದಕ್ಕೆ ಯಾರಿಗೂ ಅವಕಾಶ ನೀಡಬೇಡಿ. ಅಂತಹವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ’ ಎಂದರು.
ಪಶ್ಚಿಮ ಘಟ್ಟ ಸಂರಕ್ಷಣೆ ಕುರಿತ ಕಸ್ತೂರಿರಂಗನ್ ವರದಿ ಅನುಷ್ಠಾನದ ಬಗ್ಗೆ ಕೇಂದ್ರ ಸರ್ಕಾರ ನಿರ್ಧಾರ ತೆಗೆದುಕೊಳ್ಳುತ್ತದೆ. ಪರಿಸರ ರಕ್ಷಣೆ ನಾವು ಬದ್ಧ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು

Join Whatsapp