ಬಾಂಗ್ಲಾದೇಶ ವಿರುದ್ಧ 4 ರನ್‌ಗಳ ರೋಚಕ ಜಯ ಕಂಡ ದಕ್ಷಿಣ ಆಫ್ರಿಕಾ

Prasthutha|

ನ್ಯೂಯಾರ್ಕ್‌: ಇಲ್ಲಿಯ ನಸ್ಸೌ ಕೌಂಟಿ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆದ 2024ರ ಟಿ20 ವಿಶ್ವಕಪ್‌ನ 21ನೇ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಬಾಂಗ್ಲಾದೇಶ ವಿರುದ್ಧ 4 ರನ್‌ಗಳ ರೋಚಕ ಗೆಲುವು ದಾಖಲಿಸಿತು.

- Advertisement -

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ದಕ್ಷಿಣ ಆಫ್ರಿಕಾ ತಂಡ ಮಧ್ಯಮ ಕ್ರಮಾಂಕದಲ್ಲಿ ಹೆನ್ರಿಚ್ ಕ್ಲಾಸೆನ್ ಮತ್ತು ಡೇವಿಡ್ ಮಿಲ್ಲರ್ ಅವರ ಉತ್ತಮ ಆಟದ ನೆರವಿನಿಂದ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 113 ರನ್‌ ಗಳಿಸಿತು.

114 ರನ್‌ಗಳ ಸುಲಭದ ಗುರಿ ಬೆನ್ನಟ್ಟಿದ ಬಾಂಗ್ಲಾದೇಶಕ್ಕೆ ಗೆಲುವು ಪಡೆಯಲು ಆಗಲಿಲ್ಲ. ತಂಡ 20 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು ಕೇವಲ 109 ರನ್‌ಗಳಷ್ಟೇ ಗಳಿಸಿತು. ಈ ಮೂಲಕ ಸುಲಭವಾಗಿ ಗೆಲ್ಲಬಹುದಾಗಿದ್ದ ಪಂದ್ಯವನ್ನು 4 ರನ್‌ಗಳಿಂದ ಸೋತಿದೆ.

Join Whatsapp