2-3 ವರ್ಷಗಳಲ್ಲಿ ಸಂಪೂರ್ಣ ದಕ್ಷಿಣ ಭಾರತ ಕೇಸರೀಕರಣ : ತೇಜಸ್ವಿ ಸೂರ್ಯ

Prasthutha|

ಹೈದರಾಬಾದ್ : ಇನ್ನು 2-3 ವರ್ಷಗಳಲ್ಲಿ ಸಂಪೂರ್ಣ ದಕ್ಷಿಣ ಭಾರತ ಕೇಸರೀಕರಣಗೊಳಿಸುತ್ತೇವೆ. ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪಕ್ಷದ ವಿಜಯದ ಮೂಲಕ ಅದು ಆರಂಭವಾಗಲಿದೆ ಎಂದು ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ, ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ.

ಡಿ.1ರಂದು ನಡೆಯಲಿರುವ ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿ ಅವರು ಈ ಮಾತುಗಳನ್ನಾಡಿದ್ದಾರೆ.

- Advertisement -

ಹೈದರಾಬಾದ್ ಮತ್ತು ತೆಲಂಗಾಣದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದೆ. ಇದು 2-3 ವರ್ಷಗಳಲ್ಲಿ ತಮಿಳುನಾಡು ಮತ್ತು ಕೇರಳದ ವಿಜಯಕ್ಕೆ ಹಾದಿ ಮಾಡಿಕೊಡಲಿದೆ ಎಂದು ಅವರು ತಿಳಿಸಿದ್ದಾರೆ.

- Advertisement -