ಹುಬ್ಬಳ್ಳಿ-ಬೆಂಗಳೂರು ಎಕ್ಸ್​​ಪ್ರೆಸ್ ರೈಲು ಸಂಚಾರ ಶಾಶ್ವತವಾಗಿ ಸ್ಥಗಿತಗೊಳಿಸಲು ನಿರ್ಧರಿಸಿದ ರೈಲ್ವೇ ಇಲಾಖೆ

Prasthutha|

ಬೆಂಗಳೂರು: ಪ್ರಯಾಣಿಕರ ನೀರಸ ಪ್ರತಿಕ್ರಿಯೆಯ ಕಾರಣ ಬೆಂಗಳೂರು ಹುಬ್ಬಳ್ಳಿ ಮಧ್ಯೆ ಪ್ರತಿ ದಿನ ಸಂಚರಿಸುತ್ತಿರುವ ಎಕ್ಸ್‌ಪ್ರೆಸ್ ವಿಶೇಷ (ರೈಲು ಸಂಖ್ಯೆ 07353/07354) ರೈಲು ಜುಲೈ 16 ರಿಂದ ಶಾಶ್ವತವಾಗಿ ರದ್ದಾಗಲಿದೆ ಎಂದು ವರದಿಯಾಗಿದೆ.

- Advertisement -

ಈ ದೈನಂದಿನ ಎಕ್ಸ್‌ಪ್ರೆಸ್ ವಿಶೇಷ ರೈಲನ್ನು ನೈಋತ್ಯ ರೈಲ್ವೆ (SWR) ಈ ವರ್ಷ ಮಾರ್ಚ್ 23 ರಂದು ಸೀಮಿತ ನಿಲುಗಡೆಗಳೊಂದಿಗೆ ಪ್ರಾರಂಭಿಸಿತ್ತು. ಹುಬ್ಬಳ್ಳಿಯಿಂದ ಹೊರಟ ಎಕ್ಸ್‌ಪ್ರೆಸ್ ರೈಲಿಗೆ ಬೆಂಗಳೂರಿನ ಕೆಎಸ್‌ಆರ್ ನಿಲ್ದಾಣ ತಲುಪುವ ಮೊದಲು ದಾವಣಗೆರೆ, ಬೀರೂರು, ಅರಸೀಕೆರೆ, ತುಮಕೂರು ಮತ್ತು ಯಶವಂತಪುರದಲ್ಲಿ ನಿಲುಗಡೆ ಇದೆ.

ಬೆಂಗಳೂರು-ಹುಬ್ಬಳ್ಳಿ ರೈಲು ಬೆಂಗಳೂರಿನಿಂದ ಬೆಳಗ್ಗೆ 7:30ಕ್ಕೆ ಹೊರಟು ಮಧ್ಯಾಹ್ನ 2.30ಕ್ಕೆ ಹುಬ್ಬಳ್ಳಿಗೆ ತಲುಪುತ್ತದೆ. ಹುಬ್ಬಳ್ಳಿಯಿಂದ ಮಧ್ಯಾಹ್ನ 3.15 ಕ್ಕೆ ಹೊರಟು ರಾತ್ರಿ 11.10 ಕ್ಕೆ ಬೆಂಗಳೂರು ತಲುಪುತ್ತದೆ. ರೈಲು ಮೂರು ಎಸಿ ಕೋಚ್​ಗಳು ಮತ್ತು ಏಳು ಸ್ಲೀಪರ್ ಕೋಚ್​ಗಳು ಸೇರಿದಂತೆ 16 ಕೋಚ್‌ಗಳನ್ನು ಹೊಂದಿದೆ.

- Advertisement -

ನೈಋತ್ಯ ರೈಲ್ವೆ ಅಧಿಕಾರಿಗಳ ಪ್ರಕಾರ, ರೈಲಿನ ಶೇಕಡಾ 34ಕ್ಕಿಂತ ಕಡಿಮೆ ಸೀಟುಗಳಷ್ಟೇ ಭರ್ತಿಯಾಗುತ್ತಿವೆ. ಪ್ರಯಾಣಿಕರಿಂದ ನೀರಸ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಇದು ಪ್ರಾರಂಭವಾದಾಗಿನಿಂದ, ರೈಲಿಗೆ ಉತ್ತಮ ಪ್ರತಿಕ್ರಿಯೆ ದೊರೆತಿಲ್ಲ. ಈ ರೈಲನ್ನು ನಷ್ಟದೊಂದಿಗೆ ನಿರ್ವಹಿಸಲಾಗುತ್ತಿದೆ. ಹೀಗಾಗಿ ಜುಲೈ 16ರಿಂದ ರೈಲನ್ನು ರದ್ದುಗೊಳಿಸಲು ನಿರ್ಧರಿಸಲಾಗಿದೆ ಎಂದು ತಿಳಿದುಬಂದಿದೆ.

Join Whatsapp