ಬೆಳ್ಳಂ ಬೆಳಿಗ್ಗೆ ರೌಡಿಗಳ ಮನೆ ಮೇಲೆ ಪೊಲೀಸರ ದಾಳಿ!

Prasthutha|

ಬೆಂಗಳೂರು,ಜು.31: ಅಪರಾಧ ಕೃತ್ಯಗಳಲ್ಲಿ ಸಕ್ರಿಯರಾಗಿದ್ದ ರೌಡಿಗಳ ಮನೆ ಮೇಲೆ ಆಗ್ನೇಯ ವಿಭಾಗದ ಪೊಲೀಸರು ಇಂದು ಮುಂಜಾನೆಯಿಂದ ದಾಳಿ ನಡೆಸಿದ್ದಾರೆ.

- Advertisement -

ಹಲವು ದಿನಗಳಿಂದ ತಲೆ ಮರೆಸಿಕೊಂಡಿದ್ದ ರೌಡಿಶೀಟರ್ ​ಗಳಿಗೆ ಬೆಳ್ಳಂಬೆಳಗ್ಗೆ ಶಾಕ್​ ನೀಡಿರುವ ಪೊಲೀಸರು ಠಾಣೆಗೆ ಕರೆದೊಯ್ದು ವಿಚಾರಣೆ ಕೈಗೊಂಡಿದ್ದಾರೆ.

ಆಡುಗೋಡಿ ಪೊಲೀಸ್​ ಠಾಣಾ ವ್ಯಾಪ್ತಿಯ 63 ರೌಡಿಶೀಟರ್​ ಗಳ ಮನೆ ಮೇಲೆ ಆಗ್ನೇಯ ವಿಭಾಗದ ಡಿಸಿಪಿ ಶ್ರೀನಾಥ್ ‌ಮಹದೇವ ಜೋಶಿ ಅವರ ನೇತೃತ್ವದಲ್ಲಿ ದಾಳಿ ನಡೆಸಿ ಪರಿಶೀಲನೆ ಕೈಗೊಳ್ಳಲಾಗಿದೆ.

- Advertisement -

ಕುಖ್ಯಾತ ರೌಡಿಗಳಾದ ಸುಜೀತ್, ತೇಜಸ್, ಕಿಶೋರ್, ಸುರೇಶ್, ಅತಾವುಲ್ಲಾ, ಆನಂದ್, ಗೌತಮ್, ಮಣಿಕಾಂತ್, ಆನಂದ್ ಅಲಿಯಾಸ್ ಬ್ರಿಡ್ಜ್, ಶಿವ ಅಲಿಯಾಸ್ ಹಂದಿ ಶಿವ, ಅಂಬರೀಶ್, ಗೆಜ್ಜೆ ವೆಂಕಟೇಶ್ ಸೇರಿದಂತೆ 63 ರೌಡಿ ಶೀಟರ್​ಗಳ ಮನೆಗಳ ಮೇಲೆ ಪೊಲೀಸರು ದಾಳಿ ನಡೆಸಿ ಪರಿಶೀಲನೆ ಕೈಗೊಂಡಿದ್ದಾರೆ.

ದಾಳಿಯಲ್ಲಿ 18 ರೌಡಿಗಳನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಕೈಗೊಂಡಿದ್ದು ದಾಳಿಯಲ್ಲಿ ಯಾವುದೇ ರೀತಿಯ ಮಾರಕಾಸ್ತ್ರಗಳು ದೊರೆತಿಲ್ಲ ಹೆಚ್ಚಿನ ತನಿಖೆಯನ್ನು ಕೈಗೊಳ್ಳಲಾಗಿದೆ ಎಂದರು.

Join Whatsapp