ಉತ್ತರ ಪ್ರದೇಶದಲ್ಲಿ ಎಸ್ ಪಿ, ಕಾಂಗ್ರೆಸ್ ಮೈತ್ರಿ ದೃಢ: ಅಖಿಲೇಶ್ ಯಾದವ್

Prasthutha|

ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷ ಹಾಗೂ ಕಾಂಗ್ರೆಸ್ ನಡುವಿನ ಮೈತ್ರಿಯನ್ನು ಅಖಿಲೇಶ್ ಯಾದವ್ ಖಚಿತಪಡಿಸಿದ್ದಾರೆ.

- Advertisement -

ಈಗಾಗಲೇ ಸೀಟು ಹಂಚಿಕೆ ಕುರಿತು ಎರಡೂ ಪಕ್ಷಗಳ ನಡುವೆ ಭಿನ್ನಾಭಿಪ್ರಾಯವಿರುವುದು ಎಲ್ಲರಿಗೂ ಗೊತ್ತಿದೆ. ಇದೀಗ ಬಂದ ಮಾಹಿತಿ ಪ್ರಕಾರ ಎಲ್ಲವೂ ಸರಿ ಇದೆ, ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡು ಸ್ಪರ್ಧಿಸುವುದಾಗಿ ಎಸ್ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಘೋಷಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಅಖಿಲೇಶ್, ‘ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಜತೆ ಮೈತ್ರಿ ಮಾಡಿಕೊಳ್ಳಲಾಗುವುದು. ಈ ಕುರಿತು ಶೀಘ್ರದಲ್ಲೇ ಘೋಷಣೆ ಮಾಡಲಾಗುವುದು. ನಮ್ಮ ನಡುವೆ ಯಾವುದೇ ಬಿಕ್ಕಟ್ಟು ಸೃಷ್ಟಿಯಾಗಿಲ್ಲ, ಎಲ್ಲವೂ ಸುಸೂತ್ರವಾಗಿ ನಡೆಯಲಿದೆ’ ಎಂದು ಸ್ಪಷ್ಟಪಡಿಸಿದ್ದಾರೆ.

- Advertisement -

ಲೋಕಸಭೆ ಚುನಾವಣೆಗೆ ಸಮಾಜವಾದಿ ಪಕ್ಷ(ಎಸ್ ಪಿ) ಮತ್ತು ಕಾಂಗ್ರೆಸ್ ನಡುವೆ ಸೀಟು ಹಂಚಿಕೆ ಬಹುತೇಕ ಅಂತಿಮವಾಗಿದ್ದು, ಎಸ್ ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಮತ್ತು ಪಕ್ಷದ ನಾಯಕ ರವಿದಾಸ್ ಮೆಹ್ರೋತ್ರಾ 2024ರ ಸಾರ್ವತ್ರಿಕ ಚುನಾವಣೆಗಾಗಿ ಕಾಂಗ್ರೆಸ್ ಜೊತೆ ಮೈತ್ರಿಯನ್ನು ಖಚಿತಪಡಿಸಿದ್ದಾರೆ.

ಮೈತ್ರಿಯ ವಿವರಗಳನ್ನು ಹಂಚಿಕೊಂಡ ಮೆಹ್ರೋತ್ರಾ, ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷ 63 ಸ್ಥಾನಗಳಲ್ಲಿ ಮತ್ತು ಕಾಂಗ್ರೆಸ್ 17 ಸ್ಥಾನಗಳಲ್ಲಿ ಚುನಾವಣೆಗೆ ಸ್ಪರ್ಧಿಸಲಿದೆ ಎಂದು ಹೇಳಿದರು. ನಾವು ಉತ್ತರ ಪ್ರದೇಶದಲ್ಲಿ ಎಲ್ಲಾ 80 ಸ್ಥಾನಗಳನ್ನು ಗೆಲ್ಲಲು ಪ್ರಯತ್ನಿಸುತ್ತೇವೆ” ಎಂದು ಅವರು ಹೇಳಿದ್ದಾರೆ.



Join Whatsapp