ಸಮಾಜವಾದಿ ಪಕ್ಷದ ಶಾಸಕರ ನಿವಾಸಕ್ಕೆ ಆದಾಯ ತೆರಿಗೆ ಇಲಾಖೆ ದಾಳಿ

Prasthutha|

ಲಖ್ನೋ: ಉತ್ತರ ಪ್ರದೇಶದ ಉದ್ಯಮಿ ಹಾಗೂ ಸಮಾಜವಾದಿ ಪಕ್ಷದ ಶಾಸಕ ಪುಷ್ಪರಾಜ್ ಜೈನ್ ಅವರ ನಿವಾಸ ಮತ್ತು ಸಂಸ್ಥೆ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದೆ.

- Advertisement -

ಉತ್ತರ ಪ್ರದೇಶದಲ್ಲಿ ಸುಮಾರು 50 ಸ್ಥಳಗಳಲ್ಲಿ ದಾಳಿ ನಡೆಸಲಾಗಿದ್ದು, ಭಾರೀ ಪ್ರಮಾಣದ ತೆರಿಗೆ ವಂಚನೆ ನಡೆಸಿರುವ ಬಗ್ಗೆ ಮಾಹಿತಿ ಲಭ್ಯವಾಗಿರುವ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ ಎಂದು ತನಿಖಾಧಿಕಾರಿಗಳು ಹೇಳಿದ್ದಾರೆ.

ರಾಜ್ಯದಲ್ಲಿ ಸುಗಂಧ ದ್ರವ್ಯ ವ್ಯಾಪಾರ ನಡೆಸುತ್ತಿರುವವರ ಮೇಲೆ ಭಾರೀ ದಾಳಿ ನಡೆಸಲಾಗುತ್ತಿದೆ . ಪುಷ್ಪರಾಜ್ ಜೈನ್ ಉತ್ತರಪ್ರದೇಶದಲ್ಲಿ ಸಮಾಜವಾದಿ ಪಕ್ಷದ ವಿಧಾನ ಪರಿಷತ್ತಿನ ಸದಸ್ಯರಾಗಿದ್ದಾರೆ.



Join Whatsapp