Home ಟಾಪ್ ಸುದ್ದಿಗಳು ಸಮಾಜವಾದಿ ಪಕ್ಷದ ಶಾಸಕರ ನಿವಾಸಕ್ಕೆ ಆದಾಯ ತೆರಿಗೆ ಇಲಾಖೆ ದಾಳಿ

ಸಮಾಜವಾದಿ ಪಕ್ಷದ ಶಾಸಕರ ನಿವಾಸಕ್ಕೆ ಆದಾಯ ತೆರಿಗೆ ಇಲಾಖೆ ದಾಳಿ

ಲಖ್ನೋ: ಉತ್ತರ ಪ್ರದೇಶದ ಉದ್ಯಮಿ ಹಾಗೂ ಸಮಾಜವಾದಿ ಪಕ್ಷದ ಶಾಸಕ ಪುಷ್ಪರಾಜ್ ಜೈನ್ ಅವರ ನಿವಾಸ ಮತ್ತು ಸಂಸ್ಥೆ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದೆ.

ಉತ್ತರ ಪ್ರದೇಶದಲ್ಲಿ ಸುಮಾರು 50 ಸ್ಥಳಗಳಲ್ಲಿ ದಾಳಿ ನಡೆಸಲಾಗಿದ್ದು, ಭಾರೀ ಪ್ರಮಾಣದ ತೆರಿಗೆ ವಂಚನೆ ನಡೆಸಿರುವ ಬಗ್ಗೆ ಮಾಹಿತಿ ಲಭ್ಯವಾಗಿರುವ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ ಎಂದು ತನಿಖಾಧಿಕಾರಿಗಳು ಹೇಳಿದ್ದಾರೆ.

ರಾಜ್ಯದಲ್ಲಿ ಸುಗಂಧ ದ್ರವ್ಯ ವ್ಯಾಪಾರ ನಡೆಸುತ್ತಿರುವವರ ಮೇಲೆ ಭಾರೀ ದಾಳಿ ನಡೆಸಲಾಗುತ್ತಿದೆ . ಪುಷ್ಪರಾಜ್ ಜೈನ್ ಉತ್ತರಪ್ರದೇಶದಲ್ಲಿ ಸಮಾಜವಾದಿ ಪಕ್ಷದ ವಿಧಾನ ಪರಿಷತ್ತಿನ ಸದಸ್ಯರಾಗಿದ್ದಾರೆ.

Join Whatsapp
Exit mobile version