ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಪತ್ತೆ ಸುಳ್ಳು: ಎಸ್ ಪಿ ಸಂಸದ ಶಫೀಕುರ್ರಹ್ಮಾನ್

Prasthutha|

ವಾರಾಣಸಿ: ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ ಶಿವಲಿಂಗ ಪತ್ತೆಯಾಗಿರುವುದು ಸುಳ್ಳು ಎಂದು ಸಮಾಜವಾದಿ ಪಕ್ಷದ ಸಂಸದ ಶಫೀಕುರ್ರಹ್ಮಾನ್ ಹೇಳಿದ್ದಾರೆ.

- Advertisement -


ಪ್ರತಿಯೊಂದು ಮಸೀದಿಯನ್ನೂ ಈಗ ಅನುಮಾನದಿಂದ ನೋಡಲಾಗುತ್ತಿದೆ. ಹಿಂದೂಗಳು ಮತ್ತು ಮುಸ್ಲಿಮರು ಇಂಥ ಅಪಪ್ರಚಾರ ತಡೆಯಬೇಕು ಎಂದು ಒತ್ತಾಯಿಸಿದರು.


ಮುಸ್ಲಿಮರು ತಮ್ಮ ಪೂಜಾ ಸ್ಥಳದಲ್ಲಿ ಶಿವಲಿಂಗವನ್ನು ಏಕೆ ಇಡುತ್ತಾರೆ? ನಮ್ಮಲ್ಲಿ ಮೂರ್ತಿ ಪೂಜೆ ಇಲ್ಲ. ಅದು ಷರಿಯತ್ ಗೆ ವಿರುದ್ಧವಾದದ್ದು ಎಂದು ಹೇಳಿದರು.

- Advertisement -


ದೇಶ ಮತ್ತು ಮುಸ್ಲಿಂ ಸಮುದಾಯವನ್ನು ಉಳಿಸಲು ವಕ್ಫ್ ಮಂಡಳಿ, ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಮತ್ತು ಇತರರು ಒಟ್ಟಾಗಿ ಕೆಲಸ ಮಾಡಬೇಕು ಎಂದು ತಿಳಿಸಿದರು.



Join Whatsapp