ಬೆಂಗಳೂರು: ಸ್ಪಾವೊಂದರಿಂದ ಹಣ ವಸೂಲಿ ಮಾಡಲು ಯತ್ನಿಸಿದ ಆರೋಪದ ಮೇಲೆ ಸ್ಥಳೀಯ ಸುದ್ದಿ ವಾಹಿನಿಯ ಸಿಇಒ ಸೇರಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.
‘ಸ್ಪಾ’ವೊಂದರ ವ್ಯವಸ್ಥಾಪಕನನ್ನು ಬೆದರಿಸಿ ಹಣ ಸುಲಿಗೆ ಯತ್ನಿಸಿದ ಪ್ರಕರಣದಲ್ಲಿ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಖಾಸಗಿ ಸುದ್ದಿವಾಹಿನಿ ಸಿಇಓ ವೆಂಕಟೇಶ್ ಹಾಗೂ ನಿರೂಪಕಿ ದಿವ್ಯಾ ಸಹೋದರ ಸಂದೇಶ್ ಬಂಧನವಾಗಿದ್ದು, ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.
ಕೃತ್ಯ ಬೆಳಕಿಗೆ ಬಂದ ನಂತರ ನಾಪತ್ತೆಯಾಗಿರುವ ನಿರೂಪಕಿ, ಸಚಿನ್ ಹಾಗೂ ಆಕಾಶ್ ಪತ್ತೆಗೆ ಪೊಲೀಸರು ಹುಡುಕಾಟ ನಡೆಸಿದ್ದಾರೆ.
ಇತ್ತೀಚೆಗೆ ಇಂದಿರಾನಗರದ ‘ಟ್ರಿ ಸ್ಟ್ರಾ ಅಂಡ್ ಬ್ಯೂಟಿ’ ಪಾರ್ಲರ್’ನ ವ್ಯವಸ್ಥಾಪಕ ಶಿವಶಂಕರ್ ಎಂಬುವರಿಗೆ ವೇಶ್ಯಾವಾಟಿಕೆ ನಡೆದಿದೆ ಎಂದು ಬೆದರಿಸಿ ಹಣ ಸುಲಿಗೆ ಮಾಡಲು ವೆಂಕಟೇಶ್, ದಿವ್ಯಾ ವಸಂತಾ ಹಾಗೂ ಅವರ ತಂಡ ಯತ್ನಿಸಿತ್ತು. ಈ ಬಗ್ಗೆ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು, ವೆಂಕಟೇಶ್ ಸೇರಿ ಇಬ್ಬರನ್ನು ಬಂಧಿಸಿದ್ದಾರೆ.
ಪ್ರಕರಣ ಸಂಬಂಧ ಲಗ್ಗೆರೆಯಲ್ಲಿರುವ ನಿರೂಪಕಿ ದಿವ್ಯಾ ಮನೆ ಮೇಲೆ ಪೊಲೀಸರು ದಾಳಿ ನಡೆಸಿ, ಕೆಲ ದಾಖಲೆಗಳನ್ನು ಜಪ್ತಿ ಮಾಡಿದ್ದಾರೆ. ಬಂಧನ ಭೀತಿಗೊಳಗಾದ ದಿವ್ಯಾ, ಮನೆಯಲ್ಲಿದ್ದ ಕ್ಯಾಮೆ ರಾ, ಲ್ಯಾಪ್ ಟಾಪ್ ಸೇರಿ ಕೆಲ ವಸ್ತು ಗಳನ್ನು ತೆಗೆದುಕೊಂಡು ಪರಾರಿಯಾಗಿದ್ದಾಳೆ ಎಂದು ಮೂಲಗಳು ತಿಳಿಸಿವೆ.