Home ಟಾಪ್ ಸುದ್ದಿಗಳು ಈಡಿಗ ಪದ್ಧತಿಯಂತೆ ನೆರವೇರಿದ ಸ್ಪಂದನಾ ಅಂತ್ಯಸಂಸ್ಕಾರ

ಈಡಿಗ ಪದ್ಧತಿಯಂತೆ ನೆರವೇರಿದ ಸ್ಪಂದನಾ ಅಂತ್ಯಸಂಸ್ಕಾರ

ಬೆಂಗಳೂರು: ಸ್ಯಾಂಡಲ್‌ ವುಡ್ ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ಅವರ ಅಂತ್ಯಕ್ರಿಯೆ ಇಂದು (ಆಗಸ್ಟ್ 9) ಹರಿಶ್ಚಂದ್ರ ಘಾಟ್‌ ನಲ್ಲಿ ನೆರವೇರಿತು.

ಈಡಿಗ ಪದ್ಧತಿಯಂತೆ ಸ್ಪಂದನಾ ಅವರ ಅಂತ್ಯಕ್ರಿಯೆ ಮಾಡಲಾಯಿತು.

ಆಗಸ್ಟ್ 6ರಂದು ಸ್ಪಂದನಾ ಬ್ಯಾಂಕಾಕ್‌ನಲ್ಲಿ ಹೃದಯಾಘಾತದಿಂದ ನಿಧನರಾದರು. ಬ್ಯಾಂಕಾಕ್‌ ನಿಂದ ಎಲ್ಲಾ ಪ್ರಕ್ರಿಯೆ ಮುಗಿಸಿ ನಿನ್ನೆ ತಡರಾತ್ರಿ ಸ್ಪಂದನಾ ಮೃತದೇಹ ತರಲಾಯಿತು. ಸ್ಪಂದನಾ ತಂದೆ ಬಿ.ಕೆ ಶಿವರಾಂ ಮನೆಯಲ್ಲಿ ಅಂತಿಮ ನಮನಕ್ಕೆ ಸಿದ್ಧತೆ ಮಾಡಲಾಗಿತ್ತು. ಸಿನಿಮಾ ರಂಗದ ಗಣ್ಯರು, ಆಪ್ತರು, ರಾಜಕೀಯ ಗಣ್ಯರು ಸ್ಪಂದನಾರ ಅಂತಿಮ ದರ್ಶನ ಪಡೆದರು.

Join Whatsapp
Exit mobile version