Home ಟಾಪ್ ಸುದ್ದಿಗಳು ಭಾರತ ಪ್ರವಾಸ ಕೈಗೊಂಡ ವಿದೇಶಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ

ಭಾರತ ಪ್ರವಾಸ ಕೈಗೊಂಡ ವಿದೇಶಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ

ನವದೆಹಲಿ: ಗಂಡನ ಜೊತೆ ಬೈಕ್ ನಲ್ಲಿ ಭಾರತ ಪ್ರವಾಸ ಕೈಗೊಂಡ ಸ್ಪಾನಿಷ್ ಮಹಿಳೆ ಮೇಲೆ ಜಾರ್ಖಂಡ್ ನ ದುಮ್ಕಾ ಜಿಲ್ಲೆಯಲ್ಲಿ ಸಾಮೂಹಿಕ ಅತ್ಯಾಚಾರ ನಡೆದಿರುವುದಾಗಿ ಪೊಲೀಸರು ಹೇಳಿದ್ದಾರೆ.

ಈ ಕುರಿತು ಮಾಹಿತಿ ನೀಡಿದ ಪೊಲೀಸ್ ಅಧಿಕಾರಿಯೊಬ್ಬರು, ಪ್ರವಾಸಿ ದಂಪತಿಗಳು ಬೈಕ್ ನಲ್ಲಿ ಬಾಂಗ್ಲಾದೇಶದಿಂದ ದುಮ್ಕಾ ತಲುಪಿ ಬಿಹಾರ ಮೂಲಕ ನೇಪಾಳಕ್ಕೆ ತೆರಳುತ್ತಿದ್ದರು ಎಂದು ವರದಿಯಾಗಿದೆ. ಈ ವೇಳೆ ಕತ್ತಲಾದ ಕಾರಣ ದುಮ್ಕಾದಲ್ಲಿ ಟೆಂಟ್ ಹಾಕಿ ರಾತ್ರಿ ಕಳೆಯಲು ಹಂಸ್ದಿಹಾ ಮಾರುಕಟ್ಟೆ ಬಳಿ ಬೈಕ್ ನಿಲ್ಲಿಸಿದ್ದಾರೆ. ಈ ವೇಳೆ ಅಪರಿಚಿತರ ತಂಡ ದಂಪತಿಗಳನ್ನು ಬೆದರಿಸಿ ಅತ್ಯಾಚಾರ ಎಸಗಿದ್ದಾರೆ ಎಂದು ಹೇಳಿದ್ದಾರೆ.

ಈ ಘಟನೆಗೆ ಸಂಬಂಧಿಸಿ ಪೊಲೀಸರು ಮೂವರನ್ನು ಬಂಧಿಸಿದ್ದು, ತನಿಖೆ ನಡೆಸುತ್ತಿದ್ದಾರೆ.

Join Whatsapp
Exit mobile version