ನವದೆಹಲಿ: ಮಾರ್ಚ್ 14 ರಿಂದ ಜಾರಿಗೆ ಬರುವಂತೆ ಪಂಜಾಬ್ ನಿಯೋಜಿತ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ಸಂಸದ ಭಗವಂತ್ ಮಾನ್ ಅವರ ರಾಜೀನಾಮೆಯನ್ನು ಅಂಗೀಕರಿಸಿರುವುದಾಗಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಮಂಗಳವಾರ ಹೇಳಿದ್ದಾರೆ.
ಸಂಗ್ರೂರ್ ಲೋಕಸಭಾ ಕ್ಷೇತ್ರದ ಸಂಸದ ಮಾನ್ ಸದನಕ್ಕೆ ರಾಜೀನಾಮೆ ಸಲ್ಲಿಸಿದ್ದರು.
“ಸಂಗ್ರೂರ್ ಕ್ಷೇತ್ರವನ್ನು ಪ್ರತಿನಿಧಿಸುವ ಭಗವಂತ್ ಮಾನ್ ಅವರಿಂದ ರಾಜೀನಾಮೆಗಾಗಿ ಸಲ್ಲಿಸಿದ್ದ ವಿನಂತಿಯನ್ನು ನಾನು ಸ್ವೀಕರಿಸಿದ್ದೇನೆ. ಮಾರ್ಚ್ 14 ರಿಂದ ಜಾರಿಗೆ ಬರುವಂತೆ ನಾನು ಅವರ ರಾಜೀನಾಮೆಯನ್ನು ಅಂಗೀಕರಿಸಿದ್ದೇನೆ” ಎಂದು ಬಿರ್ಲಾ ಹೇಳಿದರು.
ಪಂಜಾಬ್ ವಿಧಾನಸಭಾ ಚುನಾವಣೆಗೆ ಎಎಪಿಯ ಮುಖ್ಯಮಂತ್ರಿ ಅಭ್ಯರ್ಥಿಯಾಗಿದ್ದ ಮಾನ್, ರಾಜ್ಯದ ಧುರಿ ವಿಧಾನಸಭಾ ಕ್ಷೇತ್ರದಿಂದ ಚುನಾವಣೆಯಲ್ಲಿ ಗೆದ್ದಿದ್ದಾರೆ.