Home ಟಾಪ್ ಸುದ್ದಿಗಳು ವಿಧಾನಸಭೆಯಲ್ಲಿ ಸಾವರ್ಕರ್ ಭಾವಚಿತ್ರ ತೆಗೆಯುವ ಕುರಿತು ಸ್ಪೀಕರ್ ನಿರ್ಧರಿಸುತ್ತಾರೆ: ಸಿಎಂ ಸಿದ್ದರಾಮಯ್ಯ

ವಿಧಾನಸಭೆಯಲ್ಲಿ ಸಾವರ್ಕರ್ ಭಾವಚಿತ್ರ ತೆಗೆಯುವ ಕುರಿತು ಸ್ಪೀಕರ್ ನಿರ್ಧರಿಸುತ್ತಾರೆ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಸುವರ್ಣ ವಿಧಾನಸೌಧದ ವಿಧಾನಸಭೆಯ ಸಭಾಂಗಣದಲ್ಲಿ ಅನಾವರಣಗೊಂಡಿರುವ ಸಾವರ್ಕರ್ ಅವರ ಭಾವಚಿತ್ರವನ್ನು ತೆಗೆಯುವ ಬಗ್ಗೆ ಸ್ಪೀಕರ್ ನಿರ್ಧರಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಹೇಳಿದ್ದಾರೆ.

ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಈ ಭಾವಚಿತ್ರವನ್ನು ಅಳವಡಿಸಲಾಗಿತ್ತು. 2022ರ ಡಿಸೆಂಬರ್ ನಲ್ಲಿ ಸಾವರ್ಕರ್ ಅವರ ಭಾವಚಿತ್ರದ ಅನಾವರಣವು ಆಗಿನ ವಿರೋಧ ಪಕ್ಷವಾದ ಕಾಂಗ್ರೆಸ್ ನಿಂದ ಟೀಕೆಗೆ ಗುರಿಯಾಗಿತ್ತು. ಇದು ಏಕಪಕ್ಷೀಯ ನಿರ್ಧಾರ ಎಂದು ಆರೋಪಿಸಿತ್ತು. ಸಾವರ್ಕರ್ ಅವರ ಭಾವಚಿತ್ರವನ್ನು ತೆಗೆದುಹಾಕಲಾಗುತ್ತದೆಯೇ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ‘ಇದು ಸ್ಪೀಕರ್‌ಗೆ (ನಿರ್ಧರಿಸಲು) ಬಿಡಲಾಗಿದೆ’ ಎಂದರು.

Join Whatsapp
Exit mobile version