ಸ್ಪೀಕರ್ ಸ್ಥಾನಕ್ಕೆ ಯು.ಟಿ. ಖಾದರ್ ಆಯ್ಕೆ ಮಾಡಲು ಕಾಂಗ್ರೆಸ್ ಚಿಂತನೆ

Prasthutha|

ಬೆಂಗಳೂರು: ವಿಧಾನಸಭೆಯ ಅಧ್ಯಕ್ಷರಾಗಲು ಹಿರಿಯ ಶಾಸಕರು ಹಿಂದೇಟು ಹಾಕಿದ ಹಿನ್ನೆಲೆಯಲ್ಲಿ ಯು.ಟಿ. ಖಾದರ್ ಅವರನ್ನು ಸ್ಪೀಕರ್ ಸ್ಥಾನಕ್ಕೆ ಆಯ್ಕೆ ಮಾಡಲು ಕಾಂಗ್ರೆಸ್ ಚಿಂತನೆ ನಡೆಸಿದೆ.

- Advertisement -

ಸ್ಪೀಕರ್ ಆಗಿ ಕಾರ್ಯನಿರ್ವಹಿಸಲು ಹೈಕಮಾಂಡ್ ಯು.ಟಿ. ಖಾದರ್ ಅವರಿಗೆ ಮನವಿ ಮಾಡಿದ್ದು, ಮನವಿಗೆ ಮಂಗಳೂರು ಶಾಸಕ ಒಪ್ಪಿಗೆ ಸೂಚಿಸಿದ್ದಾರೆ ಎನ್ನಲಾಗಿದೆ.  

ಹಿರಿಯ ಶಾಸಕರಾದ ಆರ್.ವಿ. ದೇಶಪಾಂಡೆ, ಹೆಚ್.ಕೆ. ಪಾಟೀಲ್, ಬಸವರಾಜ ರಾಯರೆಡ್ಡಿ. ಬಿ.ಆರ್. ಪಾಟೀಲ್, ಕೆ.ಎನ್. ರಾಜಣ್ಣ ಮೊದಲಾದವರ ಹೆಸರುಗಳು ಸ್ಪೀಕರ್ ಸ್ಥಾನಕ್ಕೆ ಕೇಳಿ ಬಂದಿದೆ. ಆದರೆ, ಅವರು ಸ್ಪೀಕರ್ ಸ್ಥಾನ ಒಪ್ಪಿಕೊಳ್ಳಲು ನಿರಾಕರಿಸಿದ ಹಿನ್ನೆಲೆಯಲ್ಲಿ ಯು.ಟಿ. ಖಾದರ್ ಅವರನ್ನು ಆಯ್ಕೆ ಮಾಡಲು ಚಿಂತನೆ ನಡೆದಿದೆ.

- Advertisement -

ಇಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಬೆಂಗಳೂರಿಗೆ ಆಗಮಿಸಿ ಸ್ಪೀಕರ್ ಅಭ್ಯರ್ಥಿಯನ್ನು ಅಂತಿಮಗೊಳಿಸಲಿದ್ದಾರೆ. ಮಂಗಳವಾರ 11. 30ಕ್ಕೆ ಯು.ಟಿ. ಖಾದರ್ ಸ್ಪೀಕರ್ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲಿದ್ದು, ಯು.ಟಿ. ಖಾದರ್ ಅವರು ಅವಿರೋಧವಾಗಿ ಆಯ್ಕೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

Join Whatsapp