Home ಟಾಪ್ ಸುದ್ದಿಗಳು ವಿಶೇಷ ವ್ಯಕ್ತಿ ವಿಪಕ್ಷ ನಾಯಕ ಆಗುತ್ತಾರೆ: ಮಾಜಿ ಸಚಿವ ನಿರಾಣಿ

ವಿಶೇಷ ವ್ಯಕ್ತಿ ವಿಪಕ್ಷ ನಾಯಕ ಆಗುತ್ತಾರೆ: ಮಾಜಿ ಸಚಿವ ನಿರಾಣಿ

ಬೆಳಗಾವಿ: ವಿರೋಧ ಪಕ್ಷದ ನಾಯಕನನ್ನಾಗಿ ವಿಶೇಷ ವ್ಯಕ್ತಿಯನ್ನು ಆಯ್ಕೆ ಮಾಡುವ ಹಿನ್ನೆಲೆಯಲ್ಲಿ ವಿಳಂಬವಾಗಿದೆ ಎಂದು ಮಾಜಿ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ.


ನಗರದ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ವಿರೋಧ ಪಕ್ಷ ನಾಯಕನ ಸ್ಥಾನ ಯಾರಿಗೆ ಕೊಟ್ಟರೂ ಅವರು ನಮ್ಮ ಪಕ್ಷದವರೇ. ನಮ್ಮ ಪಕ್ಷದ ಹಿರಿಯರು, ರಾಜ್ಯ, ರಾಷ್ಟ್ರ ನಾಯಕರು ಸೇರಿ ಯಾರನ್ನು ವಿಪಕ್ಷ ನಾಯಕನಾಗಿ ಘೋಷಣೆ ಮಾಡಿದರೂ ಅದನ್ನು ತುಂಬು ಹೃದಯದಿಂದ ಸ್ವಾಗತ ಮಾಡುತ್ತೇನೆ ಎಂದು ಹೇಳಿದರು.


ನೀವು ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿನಾ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ರಾಜ್ಯಾಧ್ಯಕ್ಷ ಆಗುವುದಿಲ್ಲ. ಪಕ್ಷದ ಸಂಘಟನೆಯಲ್ಲಿ ನಾನಿರುತ್ತೇನೆ. ರಾಜ್ಯಾಧ್ಯಕ್ಷನಾಗಿಯೇ ಪಕ್ಷ ಸಂಘಟನೆ ಮಾಡಬೇಕು ಅಂತಾ ಏನೂ ಇಲ್ಲ. ಬೆಳಗಾವಿ ವಿಭಾಗದಲ್ಲಿ ಯಾವುದೇ ಹುದ್ದೆಯನ್ನು ತೆಗೆದುಕೊಳ್ಳದೆಯೇ ಪಕ್ಷ ಸಂಘಟನೆ ಮಾಡುತ್ತೇನೆ ಎಂದು ಸ್ಪಷ್ಟಪಡಿಸಿದರು.

Join Whatsapp
Exit mobile version