ರೈತರ ಮಕ್ಕಳಿಗೆ ವಿಶೇಷ ವಿದ್ಯಾರ್ಥಿ ವೇತನ: ಮುಖ್ಯಮಂತ್ರಿ ಬೊಮ್ಮಾಯಿ ಘೋಷಣೆ

Prasthutha|

ಬೆಂಗಳೂರು, ಜು.28: ರೈತರ ಮಕ್ಕಳಿಗೆ ವಿಶೇಷ ವಿದ್ಯಾರ್ಥಿ ವೇತನ, ಹಿರಿಯ ನಾಗರಿಕರಿಗೆ ಸಂಧ್ಯಾ ಸುರಕ್ಷಾ ಯೋಜನೆಯ ಹಣವನ್ನು ರೂ.1000 ರಿಂದ ರೂ.1,200ಕ್ಕೆ ಹೆಚ್ಚಳ ಸೇರಿದಂತೆ ವಿವಿಧ ಯೋಜನೆಗಳನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.

- Advertisement -

ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಚೊಚ್ಚಲ ಪತ್ರಿಕಾಗೋಷ್ಠಿ ನಡೆಸಿದ ಅವರು, ತಮ್ಮ ಮೊದಲ ಆದ್ಯತೆ ಕಡತಗಳಿಗೆ ಚುರುಕು ಮುಟ್ಟಿಸುವುದಾಗಿದೆ. ಆದಷ್ಟು ಬೇಗ ಬಾಕಿ ಕಡತಗಳ ವಿಲೇವಾರಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

  ಜನಪರ ಕಾಳಜಿಯಿಂದ ಕೆಲಸ ಮಾಡುತ್ತೇನೆ, ಇದರ ಮೊದಲ ಭಾಗವಾಗಿ ರೈತರ ಮಕ್ಕಳಿಗೆ ವಿದ್ಯಾಭ್ಯಾಸಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ವಿಶೇಷ ವಿದ್ಯಾರ್ಥಿ ವೇತನವನ್ನು ಘೋಷಣೆ ಮಾಡುತ್ತಿದ್ದೇನೆ. ಹಿರಿಯ ನಾಗರಿಕರಿಗೆ ನೀಡಲಾಗುತ್ತಿರುವ ಸಂಧ್ಯಾ ಸುರಕ್ಷಾ ಯೋಜನೆಯ ಮೊತ್ತವನ್ನು ರೂ.1,000ದಿಂದ ರೂ.1,200ಕ್ಕೆ ಹೆಚ್ಚಳ ಮಾಡಲಾಗುವುದು ಎಂದು ತಿಳಿಸಿದರು.

- Advertisement -

ವಿಧವಾ ವೇತನದ ಮೊತ್ತವನ್ನು 500 ರೂ ಗಳನ್ನು 800ಕ್ಕೆ ಹೆಚ್ಚಳ ಮಾಡಲಾಗುತ್ತಿದೆ. ವಿಕಲಚೇತನರ ವೇತನದಡಿಯಲ್ಲಿ ಶೇ.40 ರಿಂದ 75ರಷ್ಟು ವ್ಯಕ್ತಿಗಳಿಗೆ ರೂ.600ರಿಂದ 800ಕ್ಕೆ ಏರಿಕೆ ಮಾಡಲಾಗುತ್ತಿದೆ. 3.66 ಸಾವಿರ ವಿಕಲಚೇತನರಿಗೆ ಇದರಿಂದ ಪ್ರಯೋಜನ ಆಗಲಿದೆ ಎಂಬುದಾಗಿ ತಿಳಿಸಿದರು.



Join Whatsapp