Home ಟಾಪ್ ಸುದ್ದಿಗಳು ಸಂತೋಷ್ ಪಾಟೀಲ್ ಸಾವು ಪ್ರಕರಣ | ತನಿಖೆಗೆ ವಿಶೇಷ ತಂಡ ರಚನೆ: ಆರಗ ಜ್ಞಾನೇಂದ್ರ

ಸಂತೋಷ್ ಪಾಟೀಲ್ ಸಾವು ಪ್ರಕರಣ | ತನಿಖೆಗೆ ವಿಶೇಷ ತಂಡ ರಚನೆ: ಆರಗ ಜ್ಞಾನೇಂದ್ರ

ಶಿವಮೊಗ್ಗ: ಬಿಜೆಪಿ ಕಾರ್ಯಕರ್ತ ಹಾಗೂ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬ ಬಗ್ಗೆ ತನಿಖೆಗೆ ಉಡುಪಿ ಎಸ್ಪಿ ವಿಷ್ಣುವರ್ಧನ್ ನೇತೃತ್ವದಲ್ಲಿ ವಿಶೇಷ ತಂಡ ರಚನೆ ಮಾಡಲಾಗಿದೆ ಎಂದು ಗೃಹಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಸಚಿವ ಕೆ.ಎಸ್.ಈಶ್ವರಪ್ಪ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ್ದಾರೆ. ಇದರಲ್ಲಿ ಪಕ್ಷದ ವರಿಷ್ಟರ ಒತ್ತಡವಿಲ್ಲ. ಪಾರದರ್ಶಕ ತನಿಖೆಗಾಗಿ ಅವರು ರಾಜೀನಾಮೆ ಸಲ್ಲಿಸಿದ್ದಾರೆ. ಸಂತೋಷ್ ಕುಟುಂಬದವರ ಸಮ್ಮುಖದಲ್ಲೇ ಲಾಡ್ಜ್ ಕೊಠಡಿ ಬಾಗಿಲು ತೆರೆಯಲಾಗಿದೆ. ಮರಣೋತ್ತರ ಪರೀಕ್ಷೆಯನ್ನೂ ಮಾಡಲಾಗಿದೆ ಎಂದು ತಿಳಿಸಿದರು.

Join Whatsapp
Exit mobile version