Home ಕರಾವಳಿ ಕ್ರಿಯಾಶೀಲರಾಗಿ ಕೆಲಸ ಮಾಡಲು ಕ್ರೀಡೆ ಸಹಕಾರಿ: ಜಿಲ್ಲಾಧಿಕಾರಿ ರವಿಕುಮಾರ್

ಕ್ರಿಯಾಶೀಲರಾಗಿ ಕೆಲಸ ಮಾಡಲು ಕ್ರೀಡೆ ಸಹಕಾರಿ: ಜಿಲ್ಲಾಧಿಕಾರಿ ರವಿಕುಮಾರ್

ಮಂಗಳೂರು: ಸರ್ಕಾರಿ ನೌಕರರು ಕ್ರಿಯಾಶೀಲರಾಗಿ ಕರ್ತವ್ಯ ನಿರ್ವಹಿಸುವಲ್ಲಿ ಕ್ರೀಡೆಯು ಮಹತ್ವದ ಪಾತ್ರ ವಹಿಸುತ್ತದೆ. ಒತ್ತಡದ ನಡುವೆ ಕರ್ತವ್ಯ ನಿರ್ವಹಿಸುವ ಸರ್ಕಾರಿ ನೌಕರರಿಗೆ ಈ ಕ್ರೀಡಾಕೂಟವು ಹೊಸ ಹುಮ್ಮಸ್ಸನ್ನು ನೀಡುವಲ್ಲಿ ಸಹಕಾರಿಯಾಗಲಿದೆ ಎಂದು ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ತಿಳಿಸಿದರು.

 ಅವರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಂಗಳೂರು ಮಹಾನಗರ ಪಾಲಿಕೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆಯ ಸಂಯುಕ್ತಾಶ್ರಯದಲ್ಲಿ ನಗರದ ಮಂಗಳಾ ಕ್ರೀಡಾಂಗಣದಲ್ಲಿ ಬುಧವಾರ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು. 

     ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ಸರ್ಕಾರಿ ನೌಕರರು ಕ್ರೀಡಾಕೂಟದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸೋಲು, ಗೆಲುವನ್ನು ಸಮಾನವಾಗಿ ಸ್ವೀಕರಿಸಿ ಕ್ರೀಡಾ ಮನೋಭಾವದಿಂದ ಸ್ಪರ್ಧಿಸುವಂತೆ ಕರೆ ನೀಡಿದರು. 

     ಅಂತಾರಾಷ್ಟ್ರೀಯ ಮಟ್ಟದ ಪವರ್ ಲಿಫ್ಟಿಂಗ್ ಕ್ರೀಡಾಪಟು ಜಯಪ್ಪ ಲಮಾಣಿ ಅವರು ಕ್ರೀಡಾಪ್ರತಿಜ್ಞೆ ಬೋಧಿಸಿದರು. ರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳಾದ ನಾಗರಾಜ್ ಖಾರ್ವಿ,  ಮಣಿಕಂಠ, ಇಂದಿರಾ ಹಾಗೂ ಭಾಗೀರಥಿ ರೈ ಅವರು ಕ್ರೀಡಾ ಜ್ಯೋತಿಯನ್ನು ಹಸ್ತಾಂತರಿಸಿದರು.

      ಕಾರ್ಯಕ್ರಮದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರಾದ ರವಿ ವೈ ನಾಯಕ್, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಪಿ.ಕೆ. ಕೃಷ್ಣ, ಜಿಲ್ಲಾ ಶಾಖೆಯ ಉಪಾಧ್ಯಕ್ಷರುಗಳು, ಪದಾಧಿಕಾರಿಗಳು, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಶಾಖೆಗಳ ಅಧ್ಯಕ್ಷರು  ಉಪಸ್ಥಿತರಿದ್ದರು.

     ದೈಹಿಕ ಶಿಕ್ಷಣ ಶಿಕ್ಷಕರಾದ ಮೋಹನ್ ಶಿರ್ಲಾಲ್ ಅವರು ನಿರೂಪಿಸಿದರು.

Join Whatsapp
Exit mobile version