ರೇಣುಕಾಸ್ವಾಮಿ ಹತ್ಯೆ; SPP ಬದಲಾವಣೆಗೆ ಸರ್ಕಾರದ ಮೇಲೆ ಯಾವುದೇ ಒತ್ತಡವಿಲ್ಲ: ಸಿದ್ದರಾಮಯ್ಯ

Prasthutha|

- Advertisement -

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಎಸ್‌ಪಿಪಿ ಬದಲಾವಣೆಗೆ ಸರ್ಕಾರದ ಮೇಲೆ ಯಾವುದೇ ಒತ್ತಡಗಳಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಸರ್ಕಾರ ನೇಮಿಸಿರುವ ಎಸ್‌ಪಿಪಿ ಪ್ರಸನ್ನಕುಮಾರ್‌ ಅವರನ್ನು ಬದಲಿಸುವಂತೆ ಯಾವುದೇ ಒತ್ತಡಗಳೂ ಬರುತ್ತಿಲ್ಲ. ಯಾವುದೇ ಸಚಿವರು, ಶಾಸಕರೂ ಒತ್ತಡ ಹಾಕಿಲ್ಲ, ಯಾವುದೇ ಒತ್ತಡಕ್ಕೂ ನಾವು ಮಣಿಯುವುದೂ ಇಲ್ಲ. ಕಾನೂನು ರೀತಿಯಲ್ಲಿಯೇ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚಿಸಿದ್ದೇನೆಂದು ಸ್ಪಷ್ಟಪಡಿಸಿದರು.

Join Whatsapp