ಸರ್ದಾರ್​ ಪಟೇಲ್​ ಕ್ರಿಕೆಟ್​ ಸ್ಟೇಡಿಯಂ ಈಗ ನರೇಂದ್ರ ಮೋದಿ ಸ್ಟೇಡಿಯಂ!

Prasthutha|

- Advertisement -

ಅಹಮದಾಬಾದ್​: ಗುಜರಾತ್​ನ ಅಹಮದಾಬಾದ್​ನಲ್ಲಿರುವ ಸರ್ದಾರ್​ ವಲ್ಲಭ್‌ಭಾಯಿ ಪಟೇಲ್ ಕ್ರಿಕೆಟ್​ ಸ್ಟೇಡಿಯಂ ಹೆಸರನ್ನು ನರೇಂದ್ರ ಮೋದಿ ಸ್ಟೇಡಿಯಂ ಎಂದು ಮರುನಾಮಕರಣ ಮಾಡಲಾಗಿದೆ.

ವಿಶ್ವದ ಅತಿದೊಡ್ಡ ಕ್ರಿಕೆಟ್ ಸ್ಟೇಡಿಯಂ ಎಂಬ ಖ್ಯಾತಿ ಪಡೆದಿರುವ ಮೊಟೆರಾದ ಸರ್ದಾರ್ ಪಟೇಲ್ ಸ್ಟೇಡಿಯಂ ಅನ್ನು ಇಂದು (ಫೆ.24) ರಾಷ್ಟ್ರಪತಿ ರಾಮನಾಥ ಕೋವಿಂದ ಅಧಿಕೃತವಾಗಿ ಲೋಕಾರ್ಪಣೆಗೊಳಿಸಿದ್ದಾರೆ. ಕ್ರೀಡಾಂಗಣದ ಉದ್ಘಾಟನೆಯಲ್ಲಿ ಗೃಹ ಸಚಿವ ಅಮಿತ್​ ಶಾ ಹಾಗೂ ಕ್ರೀಡಾ ಸಚಿವ ಕಿರಣ್​ ರಿಜಿಜು ಭಾಗವಹಿಸಿದ್ದರು.

- Advertisement -

ಇದು ವಿಶ್ವದ ಅತಿದೊಡ್ಡ ಕ್ರಿಕೆಟ್ ಕ್ರೀಡಾಂಗಣವಾಗಿದ್ದು, 1,10,000 ಆಸನಗಳ ಸಾಮರ್ಥ್ಯ ಹೊಂದಿದೆ. ಇದರ ನಂತರ 2ನೇ ಸ್ಥಾನವನ್ನು ಆಸ್ಟ್ರೇಲಿಯಾದ ಮೆಲ್ಬೋರ್ನ್ ಕ್ರಿಕೆಟ್ ಮೈದಾನ ಪಡೆದುಕೊಂಡಿದ್ದು, ಅದು ಸುಮಾರು 1 ಲಕ್ಷ ಜನ ಕೂರುವ ಆಸನಗಳ ಸಾಮರ್ಥ್ಯ ಹೊಂದಿದೆ. ಸದ್ಯ ಕೊವಿಡ್-19 ನಿಯಮಾವಳಿಗಳಿಂದಾಗಿ ಕ್ರೀಡಾಂಗಣದ ಸಾಮರ್ಥ್ಯವನ್ನು 50% ರಷ್ಟು ಮುಚ್ಚಲಾಗಿದ್ದರೂ, 50 ಸಾವಿರಕ್ಕೂ ಹೆಚ್ಚು ಅಭಿಮಾನಿಗಳು ಕ್ರೀಡಾಂಗಣಕ್ಕೆ ಹರಿದು ಬರುವ ನಿರೀಕ್ಷೆಯಿದೆ.



Join Whatsapp