ಕೊಲಂಬೊ: ಭಾರತ, ಚೀನಾ ಹಾಗೂ ರಷ್ಯಾ ಸೇರಿದಂತೆ ಏಳು ದೇಶಗಳ ಪ್ರವಾಸಿಗರಿಗೆ ಉಚಿತ ಪ್ರವಾಸಿ ವೀಸಾ ನೀಡುವ ನೀತಿಗೆ ಶ್ರೀಲಂಕಾ ಕ್ಯಾಬಿನೆಟ್ ಅನುಮೋದನೆ ನೀಡಿದೆ ಎಂದು ಲಂಕಾ ವಿದೇಶಾಂಗ ಸಚಿವ ಅಲಿ ಸಬ್ರಿ ಅವರು ಮಂಗಳವಾರ ತಿಳಿಸಿದ್ದಾರೆ.
ಸಾಲದ ಸುಳಿಯಲ್ಲಿ ಸಿಲುಕಿರುವ ದ್ವೀಪ ರಾಷ್ಟ್ರದ ಪ್ರವಾಸೋದ್ಯಮ ಕ್ಷೇತ್ರವನ್ನು ಮರುನಿರ್ಮಾಣ ಮಾಡುವ ಪ್ರಯತ್ನಗಳ ಭಾಗವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದರು.
ಉಚಿತ ಪ್ರವಾಸಿ ವೀಸಾ ನೀತಿಯನ್ನು ಪ್ರಾಯೋಗಿಕವಾಗಿ ಮಾರ್ಚ್ 31, 2024 ರವರೆಗೆ ಜಾರಿಗೆ ತರಲಾಗುವುದು ಎಂದು ವಿದೇಶಾಂಗ ಸಚಿವ ಸಬ್ರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.