ಕೊಲಂಬೋ: ವಿಶ್ವಕಪ್’ ಸೋಲಿನ ಬಳಿಕ ಕ್ರಿಕೆಟ್ ಮಂಡಳಿಯನ್ನೇ ಶ್ರೀಲಂಕಾ ವಜಾಗೊಳಿಸಿದೆ. ಲಂಕಾದ ಕ್ರೀಡಾ ಸಚಿವ ರೋಶನ್ ರಣಸಿಂಘೆ ರಾಷ್ಟ್ರೀಯ ಕ್ರಿಕೆಟ್ ಮಂಡಳಿಯನ್ನು ವಜಾಗೊಳಿಸಿದ್ದಾರೆ. 1996ರ ವಿಶ್ವಕಪ್ ವಿಜೇತ ತಂಡದ ನಾಯಕ ಅರ್ಜುನ ರಣತುಂಗ ಅವರನ್ನು ಮಧ್ಯಾಂತರ ಮಂಡಳಿಯ ಅಧ್ಯಕ್ಷರನ್ನಾಗಿ ನೇಮಿಸಿದ್ದಾರೆ. ಕ್ರಿಕೆಟ್ ಮಂಡಳಿಯ ಎರಡನೇ ಅತ್ಯುನ್ನತ ಅಧಿಕಾರಿ ಮೋಹನ್ ಡಿ ಸಿಲ್ವಾ ರಾಜೀನಾಮೆ ನೀಡಿದ ಒಂದು ದಿನದ ನಂತರ ಇಡೀ ಮಂಡಳಿ ವಜಾಗೊಂಡಂತಾಗಿದೆ.
ಮುಂಬೈನಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ಭಾರತದ 358 ರನ್‌ಗಳ ಗುರಿ ಬೆನ್ನತ್ತಿದ ಶ್ರೀಲಂಕಾ ಕೇವಲ 55 ರನ್‌ಗಳಿಗೆ ಆಲೌಟ್ ಆಗಿತ್ತು. ಇದು ವಿಶ್ವಕಪ್ ಇತಿಹಾಸದಲ್ಲಿಯೇ ನಾಲ್ಕನೇ ಕನಿಷ್ಠ ಮೊತ್ತವಾಗಿದೆ. ದೇಶದಲ್ಲೆಡೆ ಆಕ್ರೋಶ ಸೃಷ್ಟಿಸಿದ ಆಟಕ್ಕೆ ರಣಸಿಂಘೆ ಕೋಪಗೊಂಡು, ಶ್ರೀಲಂಕಾ ಕ್ರಿಕೆಟ್ ಅಧಿಕಾರಿಗಳಿಗೆ ಅಧಿಕಾರದಲ್ಲಿ ಮುಂದುವರಿಯಲು ಯಾವುದೇ ನೈತಿಕ ಹಕ್ಕಿಲ್ಲ ಎಂದು ಹೇಳಿದ್ದರು. ಅವರು ಸ್ವಯಂಪ್ರೇರಣೆಯಿಂದ ರಾಜೀನಾಮೆ ನೀಡಬೇಕು ಎಂದೂ ಆಗ್ರಹಿಸಿದ್ದರು.