ಪ್ರಧಾನಿ ಮೋದಿ ಪ್ರಮಾಣ ವಚನ ಸಮಾರಂಭಕ್ಕೆ ಶ್ರೀಲಂಕಾ ಅಧ್ಯಕ್ಷ, ಬಾಂಗ್ಲಾ ಪ್ರಧಾನಿ ಭಾಗಿ

Prasthutha|

ನವದೆಹಲಿ: ಎನ್ ಡಿಎ ಸರ್ವಾನುಮತದ ಮೂಲಕ ಎನ್ ಡಿಎ ನಾಯಕನಾಗಿ ಪ್ರಧಾನಿ ಮೋದಿ ಅವರನ್ನು ಆಯ್ಕೆ ಮಾಡಿದೆ. ಇದರ ಜತೆಗೆ ಶನಿವಾರ ಮೋದಿ ಅವರು 3ನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ.

- Advertisement -

ಈ ಪ್ರಮಾಣ ವಚನ ಕಾರ್ಯಕ್ರಮಕ್ಕೆ ವಿದೇಶಿ ಗಣ್ಯರಿಗೆ ಆಹ್ವಾನ ನೀಡಲಾಗಿದೆ. ಈಗಾಗಲೇ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಮತ್ತು ಶ್ರೀಲಂಕಾದ ಪ್ರಧಾನಿ ನಿಲ್ ವಿಕ್ರಮಸಿಂಘೆ ಅವರು ಈ ಕಾರ್ಯಕ್ರಮದಲ್ಲಿ ಭಾಗವಹಿಸುದಾಗಿ ದೃಢಪಡಿಸಿದ್ದಾರೆ. ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಮತ್ತು ಶ್ರೀಲಂಕಾದ ಪ್ರಧಾನಿ ನಿಲ್ ವಿಕ್ರಮಸಿಂಘೆ ತಾವು ಮೋದಿ ಪ್ರಮಾಣವಚನ ಕಾರ್ಯಕ್ರಮದಲ್ಲಿ ಭಾಗವಹಿಸುವುದಾಗಿ ಫೋನ್ ಕರೆ ಮೂಲಕ ತಿಳಿಸಿದ್ದಾರೆ. ಹಾಗೂ ಪ್ರಧಾನಿ ಮೋದಿಗೆ ಅಭಿನಂದನೆಯನ್ನು ತಿಳಿಸಿದ್ದಾರೆ. ಇನ್ನು ಕಾರ್ಯಕ್ರಮಕ್ಕೂ ಮುನ್ನ ಅಂದರೆ ಜೂ. 7ಕ್ಕೆ ಭಾರತಕ್ಕೆ ಬರಲಿದ್ದಾರೆ ಎಂದು ಹೇಳಲಾಗಿದೆ.


ನೇಪಾಳದ ಪ್ರಧಾನಿ ಪುಷ್ಪ ಕಮಲ್ ದಹಾಲ್, ಭೂತಾನ್ ಪ್ರಧಾನಿ ಕೌಂಟರ್ ಟ್ಶೆರಿಂಗ್ ಟೋಬ್ಗೇ, ಮಾರಿಷಸ್ ಪ್ರಧಾನಿ ಪ್ರವಿಂದ್ ಜುಗ್ನಾಥ್ ಅವರಿಗೂ ಆಹ್ವಾನ ನೀಡಲಾಗಿದೆ. ಅವರು ಕೂಡ ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಬಗ್ಗೆ ಇನ್ನು ಅವರು ದೃಢಪಡಿಸಿಲ್ಲ.



Join Whatsapp