ಸೋಮವಾರಪೇಟೆ: ಗಣರಾಜ್ಯೋತ್ಸವದ ಮೆರವಣಿಗೆಗೆ ಬ್ರಹ್ಮಶ್ರೀ ನಾರಾಯಣ ಗುರುಗಳ ಪ್ರತಿಮೆ ಇರುವ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನೀಡದೆ ಅವಮಾನ ಮಾಡಿರುವುದು ಖಂಡನೀಯ ಎಂದು ಸೋಮವಾರಪೇಟೆ ಶ್ರೀ ನಾರಾಯಣಗುರು ಸೇವಾ ಸಂಘ ತಿಳಿಸಿದೆ.
ಜ.26ರಂದು ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಆಚರಣೆಗೆ ಕೇರಳ ರಾಜ್ಯದಿಂದ ಕಳುಹಿಸಿಕೊಟ್ಟಿದ್ದ ನಾರಾಯಣ ಗುರುಗಳ ಪ್ರತಿಮೆಯ ಸ್ತಬ್ದಚಿತ್ರವನ್ನು ತಿರಸ್ಕರಿಸುವ ಮೂಲಕ ಹಿಂದುಳಿದ ವರ್ಗವವನ್ನು ಮತ್ತೊಮ್ಮೆ ಶೋಷಣೆಗೊಳಪಡಿಸಿದಂತಾಗಿದೆ. ಆಯ್ಕೆ ಸಮಿತಿ ಮಾಡಿರುವ ತಪ್ಪನ್ನು ಸರಿಪಡಿಸಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಅವಕಾಶವಿದ್ದು, ಗುರುಗಳ ಸ್ತಬ್ದ ಚಿತ್ರ ಪ್ರದರ್ಶನಕ್ಕೆ ಅವಕಾಶ ಮಾಡಿಕೊಡಬೇಕು ಎಂಬ ಮನವಿ ಪತ್ರವನ್ನು ಸೋಮವಾರಪೇಟೆ ತಾಲ್ಲೂಕು ಕಚೇರಿಯಲ್ಲಿ ಉಪಸ್ಥಿತರಿದ್ದ ಜಿಲ್ಲಾಧಿಕಾರಿ ಡಾ.ಸತೀಶ್ ಕುಮಾರ್ ಅವರ ಮೂಲಕ ಕೇಂದ್ರ ಸರ್ಕಾರಕ್ಕೆ ಕಳುಹಿಸಲಾಯಿತು.