ಜ್ಞಾನ ಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮಿ ಇನ್ನಿಲ್ಲ

Prasthutha|

ವಿಜಯಪುರ: ಜ್ಞಾನ ಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿ (70) ಇಂದು (ಜನವರಿ 2) ನಿಧನರಾಗಿದ್ದಾರೆ.

- Advertisement -

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಸಿದ್ದೇಶ್ವರ ಸ್ವಾಮೀಜಿ ಅವರಿಗೆ ವೈದ್ಯರು ಆಶ್ರಮದಲ್ಲೇ ಚಿಕಿತ್ಸೆ ನೀಡುತ್ತಿದ್ದರು. ಆದರೆ, ಇಂದು ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದರು.

ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಸಿದ್ದೇಶ್ವರ ಸ್ವಾಮೀಜಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಲು ನಿರಾಕರಿಸಿದ್ದರು. ಈ ಹಿನ್ನೆಲೆಯಲ್ಲಿ ವಿಜಯಪುರದ ಬಿಎಲ್​ಡಿಇ ಆಸ್ಪತ್ರೆಯ ವೈದ್ಯರ ತಂಡ ಸ್ವಾಮೀಜಿಗೆ ಆಶ್ರಮದಲ್ಲೇ ಚಿಕಿತ್ಸೆ ನೀಡುತ್ತಿತ್ತು.



Join Whatsapp