Home ಕರಾವಳಿ ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ಪ್ರತಿಭಾ ದಿನಾಚರಣೆಗೆ ಮುಖ್ಯ ಅತಿಥಿಯಾಗಿ ಶ್ರೀಕಾಂತ್ ಶೆಟ್ಟಿಗೆ ಆಹ್ವಾನ: NSUI ಆಕ್ರೋಶ

ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ಪ್ರತಿಭಾ ದಿನಾಚರಣೆಗೆ ಮುಖ್ಯ ಅತಿಥಿಯಾಗಿ ಶ್ರೀಕಾಂತ್ ಶೆಟ್ಟಿಗೆ ಆಹ್ವಾನ: NSUI ಆಕ್ರೋಶ

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ಪ್ರತಿಭಾ ದಿನಾಚರಣೆಗೆ ಶ್ರೀಕಾಂತ್ ಶೆಟ್ಟಿ ಕಾರ್ಕಳರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಿರುವುದಕ್ಕೆ NSUI ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.


ಈ ಬಗ್ಗೆ ಎನ್ ಎಸ್ ಯುಐ ಜಿಲ್ಲಾಧ್ಯಕ್ಷ ಸುಹಾನ್ ಆಳ್ವ ಟ್ವೀಟ್ ಮಾಡಿದ್ದು, ಮಂಗಳೂರಿನ ಹಂಪನಕಟ್ಟೆಯ ವಿಶ್ವವಿದ್ಯಾನಿಲಯ ಕಾಲೇಜು ಹಿಂದಿನಿಂದಲೂ ಕೋಮು ವಿಷ ಬಿತ್ತುವ ಸಂಘನೆಗಳಿಗೆ ಬೆಂಬಲ ನೀಡುತ್ತಾ ಬಂದಿದೆ, ಅದರ ಮುಂದುವರಿದ ಭಾಗವಾಗಿ ಜೂನ್ 23 ರಂದು ಕಾಲೇಜಿನಲ್ಲಿ ನಡೆಯಲಿರುವ ಪ್ರತಿಭಾ ದಿನಾಚರಣೆಗೆ ಕೋಮು ಸಂಘನೆಯ ನಾಯಕ, ಬಾಡಿಗೆ ಭಾಷಣಕಾರ ಶ್ರೀಕಾಂತ್ ಶೆಟ್ಟಿ ಕಾರ್ಕಳ ರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಿದೆ. ಈ ಕಾರ್ಯಕ್ರಮದ ಹಿಂದೆ ರೂವಾರಿ ABVPಗರೇ.
ಯಾವುದೇ ಕಾರಣಕ್ಕೂ NSUI ಸಂಘಟನೆಯು ಈ ಕಾರ್ಯಕ್ರಮವನ್ನು ನಡೆಸಲು ಬಿಡುವುದಿಲ್ಲ. ವಿದ್ಯಾರ್ಥಿಗಳನ್ನು ಮರುಳು ಮಾಡಿ ಬಾಡಿಗೆ ಭಾಷಣಕಾರರಿಗೆ ಮಾರಾಟ ಮಾಡುವ ABVPಯ ಸೊಕ್ಕನ್ನು NSUI ಇಳಿಸುವುದು ಶತಸಿದ್ಧ ಎಂದು ಹೇಳಿದ್ದಾರೆ.

Join Whatsapp
Exit mobile version