ಚಿಕ್ಕಮಗಳೂರು: ಮಲೆನಾಡಿನಲ್ಲಿ ಮಳೆ ಮುಂದುವರಿದಿದ್ದು, ಕೊಪ್ಪ-ಶೃಂಗೇರಿ ರಾಜ್ಯ ಹೆದ್ದಾರಿ ಕುಸಿಯುವ ಹಂತಕ್ಕೆ ತಲುಪಿದೆ.
ಶೃಂಗೇರಿ ತಾಲೂಕಿನ ಉಳುಮೆ ಗ್ರಾಮದ ಬಳಿ ರಾಜ್ಯ ಹೆದ್ದಾರಿಯಲ್ಲಿ ಬಿರುಕು ಕಾಣಿಸಿಕೊಂಡಿದ್ದು, ರಸ್ತೆ ಕುಸಿಯುವ ಭೀತಿ ಎದುರಾಗಿದೆ.
ಈ ದಾರಿಯಾಗಿ ಸಂಚರಿಸುವ ವಾಹನ ಸವಾರರಿಗೆ ರಸ್ತೆಯಲ್ಲಿ ರೆಡ್ ಪಟ್ಟಿ ಅಳವಡಿಸಿ ಎಚ್ಚರಿಕೆ ನೀಡಲಾಗುತ್ತಿದೆ.