ಸಚಿವ ಅಶೋಕ್ ಪಿಎ ವಿರುದ್ಧ ಲಂಚದ ಆರೋಪ ಮಾಡಿದ್ದ ಶೃಂಗೇರಿ ಸಬ್ ರಿಜಿಸ್ಟ್ರಾರ್ ಸಸ್ಪೆಂಡ್!

Prasthutha: July 9, 2021

►15 ವರ್ಷಗಳ ಹಿಂದಿನ ಕಾರಣ ಕೊಟ್ಟು ವಜಾ!

ಚಿಕ್ಕಮಗಳೂರು: ಕಂದಾಯ ಸಚಿವ ಆರ್.ಅಶೋಕ್ ಪಿಎ ತನ್ನಲ್ಲಿ ಲಂಚ ಕೇಳಿದ್ದರು ಎಂದು ಆರೋಪ ಮಾಡಿದ್ದ ಶೃಂಗೇರಿ ಸಬ್ ರಿಜಿಸ್ಟ್ರಾರ್ ಚೆಲುವರಾಜ್ ಅವರನ್ನು ಸೇವೆಯಿಂದ ಅಮಾನತು ಮಾಡಿ ಆದೇಶಿಸಲಾಗಿದೆ.

ಚೆಲುವರಾಜ್ 2005-06 ರಲ್ಲಿ ಮಂಡ್ಯದಲ್ಲಿ ಕಾರ್ಯನಿರ್ವಹಿಸುತ್ತಿದ್ದ ವೇಳೆ ಕರ್ತವ್ಯ ಲೋಪ ಮಾಡಿದ್ದರು ಎಂದು ಆರೋಪಿಸಲಾಗಿದ್ದು, ಮಂಡ್ಯದಲ್ಲಿ ಕರ್ತವ್ಯದಲ್ಲಿದ್ದಾಗ ಸರ್ಕಾರಕ್ಕೆ ಸೇರಬೇಕಿದ್ದ ಹಣವನ್ನು ದುರುಪಯೋಗ ಮಾಡಿದ್ದರು ಎಂಬ ಕಾರಣ ನೀಡಿ ಅಮಾನತು ಮಾಡಲಾಗಿದೆ. ಚೆಲುವರಾಜ್ ಸೇರಿ 7 ಜನರು ಸೇವೆಯಿಂದ ವಜಾ ಮಾಡಲಾಗಿದೆ.

ಹಣ ಬ್ಯಾಂಕಿಗೆ ಸಂದಾಯವಾದ ಬಳಿಕ ಚಲನ್ ತಿದ್ದಿದ್ದ ಆರೋಪದಡಿ ಚೆಲುವರಾಜ್ ಸೇರಿ 7ಮಂದಿ ವಿರುದ್ಧ ದೂರು ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಚೆಲುವರಾಜ್ ಸೇರಿ 7 ಜನರನ್ನು ಸೇವೆಯಿಂದ ವಜಾಗೊಳಿಸಿ ಶಿಸ್ತು ಪ್ರಾಧಿಕಾರ ಹಾಗೂ ನೋಂದಣಿ ಪರಿವೀಕ್ಷಕ ಮೋಹನ್ ರಾಜ್ ಆದೇಶಿಸಿದ್ದಾರೆ.

ಕೆಲ ತಿಂಗಳ ಹಿಂದೆ ಸಚಿವ ಆರ್.ಅಶೋಕ್ ಅವರ ಆಪ್ತ ಸಹಾಯಕ ತನ್ನಲ್ಲಿ ಲಂಚ ಕೇಳಿದ್ದರು ಎಂದು ಚೆಲುವರಾಜ್ ಆರೋಪಿಸಿದ್ದರು.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ