ನಿಷೇಧಾಜ್ಞೆ ಉಲ್ಲಂಘಿಸಿ ಪರೀಕ್ಷಾ ಕೇಂದ್ರಗಳಿಗೆ ಶ್ರೀರಾಮುಲು ಭೇಟಿ; ಅಸಮಾಧಾನ ವ್ಯಕ್ತಪಡಿಸಿದ ಪೋಷಕರು

Prasthutha|

ಬಳ್ಳಾರಿ: ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದ್ದರೂ, ಸಾರಿಗೆ ಸಚಿವ ಶ್ರೀರಾಮುಲು ನಿಷೇಧಾಜ್ಞೆ ಉಲ್ಲಂಘಿಸಿ ನಗರದ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಗಳಿಗೆ   ಭೇಟಿ ನೀಡಿರುವುದು ವಿವಾದಕ್ಕೆ ಕಾರಣವಾಗಿದೆ ಎಂದು ಮಾಧ್ಯಮಗಳು  ವರದಿ ಮಾಡಿದೆ.

- Advertisement -

ಶ್ರೀರಾಮುಲು ಭೇಟಿ ಪರೀಕ್ಷಾ ಮಾರ್ಗಸೂಚಿಯ ಸ್ಪಷ್ಟ ಉಲ್ಲಂಘನೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಇಂಥ ಭೇಟಿ ವಿದ್ಯಾರ್ಥಿಗಳಲ್ಲಿ ಒತ್ತಡ ಸೃಷ್ಟಿಸುತ್ತದೆ ಹಾಗೂ ವಿದ್ಯಾರ್ಥಿಗಳಿಗೆ ಅನಗತ್ಯವಾಗಿ ಅಡ್ಡಿಪಡಿಸಿದಂತಾಗುತ್ತದೆ ಎಂದು ಪೋಷಕರು ಹೇಳಿದ್ದಾರೆ.

ಪರೀಕ್ಷೆ ನಡೆಯುತ್ತಿರುವಾಗ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡುವುದು ತಪ್ಪಾಗುತ್ತದೆ ಎಂಬ ಅಧಿಕಾರಿಗಳ ಸಲಹೆಯನ್ನು ನಿರ್ಲಕ್ಷಿಸಿ ಸಚಿವರು ಭೇಟಿ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.



Join Whatsapp